ಚಾಮರಾಜನಗರ: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಚಾಮರಾಜನಗರದಲ್ಲಿಯೂ ಕೊರೊನಾ ವೈರಸ್ ತನ್ನ ಆರ್ಭಟವನ್ನು ಮುಂದುವರಿದ್ದು, ಈ ಹಿನ್ನೆಲೆಯಲ್ಲಿ ಅಲ್ಲಿನ ವರ್ತಕರು ಸೆಲ್ಫ್ ಲಾಕ್ಡೌನ್ ಮೊರೆ ಹೋಗಿದ್ದಾರೆ.
ಕೊಳ್ಳೇಗಾಲ ತಾಲೂಕಿನಲ್ಲಿ ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ 15 ದಿನಗಳ ಕಾಲ ಸೆಲ್ಫ್ ಲಾಕ್ಡೌನ್ ಹೇರಲು ವರ್ತಕರು ಮುಂದಾಗಿದ್ದಾರೆ. ಹೀಗಾಗಿ ಇಂದಿನಿಂದ ಅಕ್ಟೋಬರ್ 4ರ ರವರೆಗೆ 15 ದಿನ ಬೆಳಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ನಡೆಸಲು ನಿರ್ಧಾರ ಮಾಡಿದ್ದಾರೆ.
Advertisement
Advertisement
ಚಾಮರಾಜನಗರ ಜಿಲ್ಲೆಯಲ್ಲಿ ಈಗಾಗಲೇ 3,400ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ನಿನ್ನೆ 69 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 3,495ಕ್ಕೆ ಏರಿಕೆಯಾಗಿದೆ. 698 ಸಕ್ರಿಯ ಪ್ರಕರಣಗಳಿದ್ದು, 2,724 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದೂವರೆಗೆ ಜಿಲ್ಲೆಯಲ್ಲಿ 62 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.