– ಪೊಲೀಸ್ ಇಲಾಖೆಯಲ್ಲಿ ಮತ್ತೆ ಆತಂಕ
ಬೆಂಗಳೂರು: ಕೊರೊನಾ ಎರಡನೇ ಅಲೆ ಹೆಚ್ಚಾದ ಹಿನ್ನೆಲೆ ಪೊಲೀಸ್ ಇಲಾಖೆಯಲ್ಲಿ ಮತ್ತೆ ಆತಂಕ ಮೂಡಿದ್ದು, ಕೆಲ ಹಿರಿಯ ಸಿಬ್ಬಂದಿ ಕೆಲಸಕ್ಕೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ.
ಈ ಸಂಬಂಧ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸಭೆ ಕರೆದು ನಿರ್ಧಾರ ಕೈಗೊಳ್ಳಲು ಚಿಂತನೆ ನಡೆಸಲಾಗಿದ್ದು, ಹಳೆ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement
Advertisement
ಪ್ರತಿ ಪೊಲೀಸ್ ಠಾಣೆಯಲ್ಲಿ ಟೆಸ್ಟಿಂಗ್ ಹೆಚ್ಚಿಸುವುದು, ಎಲ್ಲಾ ಪೊಲೀಸ್ ಸಿಬ್ಬಂದಿಗೆ ಮಾರ್ಗಸೂಚಿ ಪಾಲನೆಗೆ ಸೂಚನೆ. 50 ವರ್ಷ ಮೇಲ್ಪಟ್ಟವರಿಗೆ ಕೆಲಸದಿಂದ ವಿನಾಯಿತಿ, ಪ್ರಮುಖ ಪ್ರಕರಣಗಳನ್ನು ಹೊರತುಪಡಿಸಿ, ಸಣ್ಣ ಕೇಸ್ ಗಳಲ್ಲಿ ಆರೋಪಿಗಳ ಬಂಧಿಸದಿರುವುದು, ಡಿಡಿ ಕೇಸ್ ಸೇರಿದಂತೆ ಸಂಚಾರಿ ನಿಯಮ ಉಲ್ಲಂಘನೆ ಸಂಬಂಧ ವಾಹನಗಳ ಪರಿಶೀಲನೆಗೆ ತಡೆ, ಅನಾವಶ್ಯಕವಾಗಿ ಕೇಸ್ ಸಂಬಂಧ ದೂರದ ಊರುಗಳಿಗೆ ಪ್ರಯಾಣ ಮಾಡುವುದಕ್ಕೆ ಬ್ರೇಕ್. ಈ ಮೇಲಿನ ಮಾರ್ಗಸೂಚಿಗಳು ಸೇರಿದಂತೆ ಕೆಲ ಹೊಸ ನಿಯಮ ಜಾರಿಗೆ ತರುವ ಸಾಧ್ಯತೆ ಇದೆ ಎನ್ನಲಾಗಿದೆ.