ಬೆಂಗಳೂರು: ಸರ್ಕಾರದ ಕೊರೊನಾ ಮಾರ್ಗಸೂಚಿಯನ್ನು ಪಾಲನೆ ಮಾಡದೇ ನಿಯಮ ಉಲ್ಲಂಘನೆ ಮಾಡಿದವರಿಂದ ಸೋಮವಾರದವರೆಗೆ ಒಟ್ಟು 9.46 ಕೋಟಿ ರೂ. ದಂಡವನ್ನು ವಸೂಲಿ ಮಾಡಲಾಗಿದೆ.
ಬೆಂಗಳೂರು ನಗರದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದರೂ ಜನ ಮಾಸ್ಕ್ ಧರಿಸದೇ ರಸ್ತೆಗೆ ಇಳಿಯುತ್ತಿದ್ದಾರೆ ಜೊತೆಗೆ ಸಾಮಾಜಿಕ ಅಂತರವನ್ನು ಕಾಪಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಮಾರ್ಷಲ್ಗಳು ಗಲ್ಲಿ ಗಲ್ಲಿಗಳಲ್ಲಿ ನಿಂತು ದಂಡ ಪ್ರಯೋಗಕ್ಕೆ ಮುಂದಾಗುತ್ತಿದ್ದಾರೆ.
Advertisement
Advertisement
ಒಟ್ಟು 3,75,917 ಮಾಸ್ಕ್ ಧರಿಸದ ಪ್ರಕರಣಗಳು ವರದಿಯಾಗಿದ್ದು ಒಟ್ಟು 8,90,68,197 ರೂ. ದಂಡ ಸಂಗ್ರಹವಾಗಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳದ 25,073 ಪ್ರಕರಣಗಳು ವರದಿಯಾಗಿದ್ದು, ಒಟ್ಟು 55,95,060.24 ರೂ. ದಂಡ ಸಂಗ್ರಹವಾಗಿದೆ.
Advertisement
ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಇರುವುದು ಮತ್ತು ಮಾಸ್ಕ್ ಧರಿಸದೇ ಇರುವ ಒಟ್ಟು 4,00,990 ಪ್ರಕರಣಗಳಿಂದ ಒಟ್ಟು 9,46,63,257.92 ರೂ. ದಂಡ ಸಂಗ್ರಹವಾಗಿದೆ.
Advertisement
ಇಂದು ಬೆಂಗಳೂರಿನಲ್ಲಿ 3,728 ಮಂದಿಗೆ ಕೊರೊನಾ ಸೋಂಕು ಬಂದಿದ್ದು ಒಟ್ಟು ಸೋಂಕಿತರ ಸಂಖ್ಯೆ4,50,759ಕ್ಕೆ ಏರಿಕೆಯಾಗಿದೆ. ಇಂದು ಒಟ್ಟು 1,026 ಮಂದಿ ಬಿಡುಗಡೆಯಾಗಿದ್ದಾರೆ. ಒಟ್ಟು 30,782 ಸಕ್ರಿಯ ಪ್ರಕರಣಗಳಿದ್ದು, ಇಲ್ಲಿಯವರೆಗೆ ಒಟ್ಟು 4,15,309 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು 18 ಮಂದಿ ಸೇರಿ ಒಟ್ಟು 4,667 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ.