-ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದೇನೆ: ಬೂಡಾ ಅಧ್ಯಕ್ಷ ದೇವದಾಸ್ ಶೆಟ್ಟಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ ಜನ ಸಾಮಾನ್ಯರಿಗೆ ಮಾತ್ರವಲ್ಲದೇ ಜನ ನಾಯಕರಿಗೂ ಕೊರೊನಾ ಸೋಂಕು ದೃಢಪಟ್ಟಿರುವುದು ಜಿಲ್ಲೆಯಲ್ಲಿ ಹೆಚ್ಚಿನ ಭೀತಿ ಮೂಡಿಸಿದೆ.
ಕೊರೊನಾ ಬಗ್ಗೆ ಭಯ ಬೇಡ ಎಚ್ಚರ ಇರಲಿ ಎಂದು ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಬಂಟ್ವಾಳ ತಾಲೂಕಿನ ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ.
Advertisement
Advertisement
ನನಗೆ ಕೆಲ ದಿನಗಳಿಂದ ತೀವ್ರ ಜ್ವರ ಬಂದಿತ್ತು. ಹೀಗಾಗಿ ನಾನು ಸ್ವ-ಇಚ್ಛೆಯಿಂದ ಮಂಗಳೂರಿನಲ್ಲಿ ಕೊರೊನಾ ಪರೀಕ್ಷೆ ಮಾಡಿಸಿದ್ದೆ. ಅದರಲ್ಲಿ ನನಗೆ ಕೊರೊನಾ ಸೋಂಕು ಇರುವುದು ದೃಢಪಟ್ಟು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಒಂದೇ ದಿನದಲ್ಲಿ ಚೇತರಿಸಿಕೊಂಡಿದ್ದೇನೆ. ಹೀಗಾಗಿ ಜನ ಕೊರೊನಾ ಸೋಂಕಿನ ಬಗ್ಗೆ ಭಯಪಡದೇ ಎಚ್ಚರಿಕೆಯಿಂದ ಇದ್ದು, ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸಬೇಕು ಆಸ್ಪತ್ರೆಯಿಂದಲೇ ಜನರಿಗೆ ವಿಡಿಯೋ ಮಾಡಿ ಮನವಿ ಮಾಡಿದ್ದಾರೆ.