– ಓಡಿ ಹೋಗಿ ಪ್ರಾಣ ಉಳಿಸಿಕೊಂಡ ಚಾಲಕ, ನರ್ಸ್
ಬೆಳಗಾವಿ: ಕೊರೊನಾ ಸೋಂಕಿಗೆ ತುತ್ತಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಕ್ಕೆ ಅವರ ಸಂಬಂಧಿಕರು ಆಸ್ಪತ್ರೆ ಮುಂದೆ ನಿಂತಿದ್ದ ಅಂಬುಲೆನ್ಸ್ ಗೆ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಐಸಿಯುನಲ್ಲಿ ಸಾವನ್ನಪ್ಪಿದ್ದಾರೆ. ಇದರಿಂದ ರೊಚ್ಚಿಗೆದ್ದ ಮೃತನ ಸಂಬಂಧಿಕರು ಕೊರೊನಾ ವಾರ್ಡಿನ ಮುಂದೆ ನಿಂತಿದ್ದ ಅಂಬುಲೆನ್ಸ್ಗೆ ಬೆಂಕಿ ಹಚ್ಚಿ ಆಸ್ಪತ್ರೆ ಮುಂಭಾಗದಲ್ಲಿದ್ದ ಪೊಲೀಸ್ ವಾಹನ ಮತ್ತು ಕಾರುಗಳ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.
Advertisement
Advertisement
ಈ ವೇಳೆ ಹತ್ತಾರು ಜನರಿಂದ ಗುಂಪು ಐಸಿಯೂ ವಾರ್ಡಿಗೆ ನುಗ್ಗಿ ವಾರ್ಡಿನಲ್ಲಿದ್ದ ವೈದ್ಯರು ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿದೆ. ಆದರೆ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಅವರನ್ನು ತಡೆದಿದ್ದಾರೆ. ಆದರೆ ಆಗ ತಾನೇ ಅಥಣಿಯಿಂದ ಕೊರೊನಾ ರೋಗಿಯನ್ನು ಕರೆತಂದ ಆಸ್ಪತ್ರೆ ಮುಂಭಾಗ ನಿಂತಿದ್ದ ಅಂಬುಲೆನ್ಸ್ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಈ ವೇಳೆ ಅಂಬುಲೆನ್ಸ್ ಚಾಲಕ ಮತ್ತು ನರ್ಸ್ ಆಸ್ಪತ್ರೆಯೊಳಗೆ ಓಡಿಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.
Advertisement
Advertisement
ಸದ್ಯಕ್ಕೆ ಸ್ಥಳಕ್ಕೆ ಪೊಲೀಸರು ಮತ್ತು ಆಗ್ನಿಶಾಮಕ ದಳ ಬಂದು ಬೆಂಕಿಯನ್ನು ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿ ಎಂ.ಜಿ.ಹಿರೇಮಠ, ಎಸ್ಪಿ ಲಕ್ಷ್ಮಣ ನಿಂಬರಗಿ, ಪೊಲೀಸ್ ಕಮೀಷನರ್ ತ್ಯಾಗರಾಜ್, ಜಿಪಿಂ ಸಿಇಒ ರಾಜೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.