ಲಕ್ನೋ: ಭಾರತ ಕ್ರಿಕೆಟ್ ತಂಡದ ಸ್ಪಿನ್ನರ್ ಕುಲ್ದೀಪ್ ಯಾದವ್ ತಮ್ಮ ಗೆಸ್ಟ್ ಹೌಸ್ ನಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡು ಎಡವಟ್ಟು ಮಾಡಿಕೊಂಡಿದ್ದಾರೆ.
Advertisement
ಕೊರೊನಾ ಲಸಿಕೆಯನ್ನು ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ತೆಗೆದುಕೊಳ್ಳಬೇಕಿತ್ತು. ಆದರೆ ಕುಲ್ದೀಪ್ ಯಾದವ್ ಉತ್ತರ ಪ್ರದೇಶದ ಕಾನ್ಪುರದ ತನ್ನ ಗೆಸ್ಟ್ ಹೌಸ್ನಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾನ್ಪುರ ಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ.
Advertisement
ಕುಲ್ದೀಪ್ ಯಾದವ್ ಮೇ 15ರಂದು ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡು, ನಾನು ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದೇನೆ. ನೀವು ಹಾಕಿಸಿಕೊಳ್ಳಿ ಈ ಮೂಲಕ ಕೊರೊನಾ ವಿರುದ್ಧ ಒಟ್ಟಾಗಿ ಹೋರಾಡೋಣ ಎಂದು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿಕೊಂಡು ಬರೆದುಕೊಂಡಿದ್ದರು.
Advertisement
जब भी मौका मिले तुरंत टीका लगवाएं। सुरक्षित रहें क्योंकि covid19 के खिलाफ लड़ाई में एकजुट होने की आवश्यकता है ???????? pic.twitter.com/6YSHyoGmWM
— Kuldeep yadav (@imkuldeep18) May 15, 2021
Advertisement
ಕುಲ್ದೀಪ್ ಯಾದವ್ ಅವರಿಗೆ ಕಾಯ್ದಿರಿಸಿದ ಆಸ್ಪತ್ರೆಯಲ್ಲಿ ಲಿಸಿಕೆ ಪಡೆಯದೆ ತಮ್ಮ ಅತಿಥಿ ಗೃಹದಲ್ಲಿ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕಾನ್ಪುರ ಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ. ಕಳೆದ ಶನಿವಾರ ಕುಲ್ದೀಪ್ ಯಾದವ್ ಅವರು, ಕೋವಿಡ್ ಲಸಿಕೆ ಪಡೆದಿದ್ದರು. ಈ ಬಗ್ಗೆ ಸ್ವತಃ ಅವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಹಾಕಿಕೊಂಡು ಇದೀಗ ಸಂಕಷ್ಟಕ್ಕೆ ಒಳಗಾಗಿದ್ದಾರೆ.