ಮೈಸೂರು: ಕೊರೊನಾ ಸೋಂಕಿತ ಗರ್ಭಿಣಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ತಾಯಿ-ಮಗು ಇಬ್ಬರು ಸುರಕ್ಷಿತವಾಗಿದ್ದಾರೆ ಎಂದು ಮೈಸೂರು ಡಿಹೆಚ್ಓ ವೆಂಕಟೇಶ್ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆ ಕೆ.ಆರ್ ಪೇಟೆಯಿಂದ ಹೆರಿಗೆಗೆ ಬಂದಿದ್ದ ಗರ್ಭಿಣಿಗೆ ಪಾಸಿಟಿವ್ ದೃಢವಾಗಿತ್ತು. ಹೀಗಾಗಿ ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಪ್ರಸೂತಿ ತಜ್ಞರು ಹಾಗೂ ಸ್ತ್ರಿರೋಗ ತಜ್ಞರು ನಿಯೋಜಿತ ಕೋವಿಡ್ ಆಸ್ಪತ್ರೆಯಲ್ಲೆ ಸಿಜೇರಿಯನ್ ಮಾಡಿ ಹೆರಿಗೆ ಮಾಡಿಸಿದರು.
Advertisement
ಸೋಂಕಿತ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಸೋಂಕಿತ ಮಹಿಳೆಗೆ ಜನಿಸಿರುವ ಮಗು 2.7 ಕೆ.ಜಿ ತೂಕವಿದೆ ಎಂದು ಡಿಹೆಚ್ಓ ಮಾಹಿತಿ ನೀಡಿದ್ದಾರೆ.
Advertisement
ಮೈಸೂರಿನಲ್ಲಿ COVID19 ಸೋಂಕಿತ ಮಹಿಳೆ ಒಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನಮ್ಮ ಇಲಾಖೆಯ ವೈದ್ಯರು ಸಿ ಸೆಕ್ಷನ್ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮತ್ತು ಮಗು ಇಬ್ಬರೂ ಕ್ಷೇಮವಾಗಿದ್ದಾರೆ. pic.twitter.com/mvQPWZNw1h
— K'taka Health Dept (@DHFWKA) June 21, 2020