ಬೆಂಗಳೂರು: ಕೊರೊನಾ ಸೋಂಕಿನ ನಡುವೆಯೂ ಆರೋಗ್ಯ ಸಚಿವ ಶ್ರೀರಾಮುಲು ಅವರು ಆಸ್ಪತ್ರೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕಳೆದ ಮೂರು ದಿನಗಳ ಹಿಂದೆ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಸದ್ಯ ಅವರು ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗೆ ಆಸ್ಪತ್ರೆಯಲ್ಲಿ ಇದ್ದುಕೊಂಡೆ ತಮ್ಮ ಕರ್ತವ್ಯವನ್ನು ಮಾಡುತ್ತಿದ್ದಾರೆ.
Advertisement
ಕೊರೊನ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ, ಸೂಕ್ತ ಸುರಕ್ಷಿತ ಕ್ರಮಗಳ ನಡುವೆ ಕೆಲವು ಕಡತಗಳ ಪರಿಶೀಲನೆ ಮಾಡಲಾಯಿತು.
ಅಗತ್ಯ ಸಾರ್ವಜನಿಕ ಕೆಲಸಗಳು ನಿಲ್ಲಬಾರದೆಂಬ ದೃಷ್ಟಿಯಿಂದ ಕೆಲವು ತುರ್ತು ಕೆಲಸಗಳನ್ನು ಆಸ್ಪತ್ರೆಯಿಂದಲೇ ನಿರ್ವಹಿಸುತ್ತಿದ್ದೇನೆ.
ಸಹಕರಿಸುತ್ತಿರುವ ಎಲ್ಲರಿಗೂ ಧನ್ಯವಾದಗಳು. pic.twitter.com/UGnMf61UE1
— B Sriramulu (@sriramulubjp) August 11, 2020
Advertisement
ಈ ವಿಚಾರವಾಗಿ ಟ್ವೀಟ್ ಮಾಡಿರುವ ಶ್ರೀರಾಮುಲು ಅವರು, ಕೊರೊನಾ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಸೂಕ್ತ ಸುರಕ್ಷಿತ ಕ್ರಮಗಳ ನಡುವೆ ಕೆಲವು ಕಡತಗಳ ಪರಿಶೀಲನೆ ಮಾಡಲಾಯಿತು. ಅಗತ್ಯ ಸಾರ್ವಜನಿಕ ಕೆಲಸಗಳು ನಿಲ್ಲಬಾರದೆಂಬ ದೃಷ್ಟಿಯಿಂದ ಕೆಲವು ತುರ್ತು ಕೆಲಸಗಳನ್ನು ಆಸ್ಪತ್ರೆಯಿಂದಲೇ ನಿರ್ವಹಿಸುತ್ತಿದ್ದೇನೆ. ಸಹಕರಿಸುತ್ತಿರುವ ಎಲ್ಲರಿಗೂ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
Advertisement
ಕೊರೊನ ಸೋಂಕಿನ ಹಿನ್ನೆಲೆಯಲ್ಲಿ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗಳ ತಜ್ಞ ವೈದ್ಯರ ತಂಡ ನನಗೆ ಚಿಕಿತ್ಸೆ ನೀಡುತ್ತಿದೆ.
ನಾನು ಆರೋಗ್ಯದಿಂದಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ. ನಿಮ್ಮೆಲ್ಲರ ಪ್ರೀತಿಪೂರ್ವಕ ಹಾರೈಕೆಗೆ ಧನ್ಯವಾದಗಳು.#BowringHospital#LadyCurzonHospital pic.twitter.com/CLwejEMj6A
— B Sriramulu (@sriramulubjp) August 11, 2020
Advertisement
ಜೊತೆಗೆ ಆಸ್ಪತ್ರೆ ನೀಡಿರುವ ಹೆಲ್ತ್ ಬುಲೆಟಿನ್ ಅನ್ನು ಟ್ವೀಟ್ ಮಾಡಿರುವ ಆರೋಗ್ಯ ಸಚಿವರು, ಕೊರೊನ ಸೋಂಕಿನ ಹಿನ್ನೆಲೆಯಲ್ಲಿ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗಳ ತಜ್ಞ ವೈದ್ಯರ ತಂಡ ನನಗೆ ಚಿಕಿತ್ಸೆ ನೀಡುತ್ತಿದೆ. ನಾನು ಆರೋಗ್ಯದಿಂದಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ. ನಿಮ್ಮೆಲ್ಲರ ಪ್ರೀತಿ ಪೂರ್ವಕ ಹಾರೈಕೆಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.