ಚಿಕ್ಕಬಳ್ಳಾಪುರ: ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಯುವಕ ಆತ್ಮಹತ್ಯೆಗೆ ಶರಣಾಗಿದ್ದು, ಹೀಗಾಗಿ ಸೋಂಕಿಗೆ ಹೆದರಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.
ಗೌರಿಬಿದನೂರು ನಗರದ ಹೊರವಲಯದ ಪಿನಾಕಿನಿ ನದಿ ಕಾಲುವೆ ಬಳಿ ಯುವಕ ಶಿವಾನಂದ ಆತ್ಮಹತ್ಯೆಗೆ ಶರಣಾಗಿದ್ದು, ಕೋವಿಡ್ ಪಾಸಿಟಿವ್ ಎಂದು ತಿಳಿದ ಬಳಿಕ ಮೊಬೈಲ್ ಸ್ವಿಚಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದ.
Advertisement
Advertisement
ಶಿವಾನಂದ ಗೌರಿಬಿದನೂರು ತಾಲೂಕಿನ ವೇದಲವೇಣಿ ನಿವಾಸಿಯಾಗಿದ್ದು, ಗೌರಿಬಿದನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ. ಈತ ಇತ್ತೀಚೆಗಷ್ಟೇ ಬೈಕ್ ಕಳವು ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದ. ಆದರೆ ಇದೀಗ ಸೋಂಕು ಪತ್ತೆಯಾಗುತ್ತಿದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದಾನೆ.