– 7 ದಿನ ವೆಂಟಿಲೇಟರ್ ನಲ್ಲಿರಿಸಿ ಚಿಕಿತ್ಸೆ
ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಪಶ್ಚಿಮ ಕ್ಷೇತ್ರದ ಶಾಸಕ ಸುರೇಶ್ ಶ್ರೀವಾತ್ಸವ್ ಕೊರೊನಾಗೆ ಬಲಿಯಾಗಿದ್ದಾರೆ. ಕಳೆದ ಏಳು ದಿನಗಳಿಂದ ಸುರೇಶ್ ಶ್ರೀವಾತ್ಸವ್ ಅವರನ್ನ ವೆಂಟಿಲೇಟರ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸುರೇಶ್ ಶ್ರೀವಾತ್ಸವ್ ಅವರಿಗೆ 76 ವರ್ಷ ವಯಸ್ಸು ಆಗಿತ್ತು.
15 ದಿನಗಳ ಹಿಂದೆ ಸುರೇಶ್ ಶ್ರೀವಾತ್ಸವ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಸುರೇಶ್ ಅವರ ಸಂಪರ್ಕದಲ್ಲಿದ್ದ ಸಚಿವರು ಸಹ ಕೊರೊನಾ ಸೋಂಕಿಗೆ ಒಳಗಾಗಿದ್ದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಬಿಜೆಪಿ ಎಲ್ಲ ನಾಯಕರು ಸುರೇಶ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
Advertisement
लखनऊ शहर से विधायक एवं उत्तर प्रदेश भाजपा के वरिष्ठ नेता श्री सुरेश श्रीवास्तव जी के निधन का समाचार बेहद पीड़ादायक है। जनप्रतिनिधि के रूप में उनकी सादगी, सरलता और उनकी कर्मठता अपने आप में एक मिसाल थी। उनके शोकाकुल परिवार के प्रति मेरी संवेदनाएँ। ॐ शान्ति!
— Rajnath Singh (@rajnathsingh) April 23, 2021
Advertisement
ಆರ್ಎಸ್ಎಸ್ ಹಿನ್ನೆಲೆಯುಳ್ಳವರಾಗಿದ್ದ ಸುರೇಶ್ ಶ್ರೀವಾತ್ಸವ್ ಅನುಭವಿ ರಾಜಕಾರಣಿ. ಸುರೇಶ್ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಕಂಬನಿ ಮಿಡಿದಿದ್ದಾರೆ.
Advertisement