ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುಣಮುಖರಾಗಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
Advertisement
ಸಿದ್ದರಾಮಯ್ಯ ಅವರು ಕೋವಿಡ್ 19 ನಿಂದ ಈಗ ಪೂರ್ಣ ಗುಣಮುಖರಾಗಿದ್ದಾರೆ. ಎರಡನೇ ಬಾರಿ ನಡೆಸಿದ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
Advertisement
ಆಸ್ಪತ್ರೆಗೆ ದಾಖಲಾದ ಮೊದಲ ಎರಡು ದಿನ ಮಾತ್ರ ಜ್ವರ ಕಾಣಿಸಿಕೊಂಡಿಸಿತ್ತು. ಉಳಿದಂತೆ ಸೋಂಕಿನ ಲಕ್ಷಣ ಇರಲಿಲ್ಲ. ಸಿದ್ದರಾಮಯ್ಯ ಅವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Advertisement
ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ.
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.
— Siddaramaiah (@siddaramaiah) August 4, 2020
Advertisement
ಕಳೆದ ಮಂಗಳವಾರ ಕೋವಿಡ್ 19 ಪಾಸಿಟಿವ್ ಬಂದು ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ಆಗಸ್ಟ್ 9ರಂದು ಟ್ವೀಟ್ ಮಾಡಿದ್ದ ಮಾಜಿ ಸಿಎಂ, ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಶನಿವಾರ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದರು.