ಬೆಂಗಳೂರು: ಮಹಾಮಾರಿ ಕೊರೊನಾ ಜೊತೆ ಮುಂಚೂಣಿ ಹೋರಾಟಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಂಬುಲೆನ್ಸ್ ಚಾಲಕರೊಬ್ಬರು ಕೋವಿಡ್ 19ಗೆ ಬಲಿಯಾಗಿದ್ದಾರೆ. ಚಾಲಕರ ನಿಧನಕ್ಕೆ ಆರೋಗ್ಯ ಸಚಿವ ಶ್ರೀರಾಮುಲು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿ ಸರ್ಕಾರಿ ಅಂಬುಲೆನ್ಸ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಜ್ಮತ್ ಅವರು ಇಂದು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಜ್ಮತ್ ಅವರು ಕೋವಿಡ್ ವಿರುದ್ಧದ ಸಮರದಲ್ಲಿ ಮುಂಚೂಣಿ ಹೋರಾಟಗಾರರಾಗಿ ಸತತವಾಗಿ ಕಾರ್ಯ ನಿರ್ವಹಿಸಿದ್ದರು.
Advertisement
ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿ ಸರ್ಕಾರಿ ಅಂಬ್ಯುಲೆನ್ಸ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀ ಅಜ್ಮತ್ ಅವರು ಇಂದು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಜ್ಮತ್ ಅವರು ಕೋವಿಡ್ ವಿರುದ್ಧದ ಸಮರದಲ್ಲಿ ಮುಂಚೂಣಿ ಹೋರಾಟಗಾರರಾಗಿ ಸತತವಾಗಿ ಕಾರ್ಯ ನಿರ್ವಹಿಸಿದ್ದರು. 1/2 pic.twitter.com/mDhIdbZQUK
— B Sriramulu (@sriramulubjp) September 16, 2020
Advertisement
ಇಂತಹ ನಿಸ್ವಾರ್ಥ ಸೇನಾನಿಗಳು ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿರುವುದರಿಂದಲೇ ಸಾವಿರಾರು ರೋಗಿಗಳ ಜೀವ ಉಳಿಯುತ್ತಿವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ದೇವರು ಅವರ ಕುಟುಂಬಕ್ಕೆ ದುಃಖತಡೆಯುವ ಶಕ್ತಿ ನೀಡಲಿ. ಅವರ ಕುಟುಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಎಲ್ಲ ಸವಲತ್ತುಗಳು & ಪರಿಹಾರಗಳನ್ನು ಶೀಘ್ರವಾಗಿ ತಲುಪಿಸಲಾಗುವುದು ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
Advertisement
Advertisement
49 ವರ್ಷದ ಅಜ್ಮತ್ ಅವರು ಕಳೆದ 5 ದಿನಗಳಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಇರುವುದರಿಂದ ಅವರು ಶ್ವಾಸಕೋಶದ ಸೋಂಕಿಗೆ ಒಳಗಾದರು. ಹೀಗಾಗಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತಸೆ ಫಲಕಾರಿಯಾಗದೇ ಮೃತಪಟ್ಟರು.
2/2
ಇಂತಹ ನಿಸ್ವಾರ್ಥ ಸೇನಾನಿಗಳು ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿರುವುದರಿಂದಲೇ ಸಾವಿರಾರು ರೋಗಿಗಳ ಜೀವ ಉಳಿಯುತ್ತಿವೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ, ದೇವರು ಅವರ ಕುಟುಂಬಕ್ಕೆ ದುಃಖತಡೆಯುವ ಶಕ್ತಿ ನೀಡಲಿ.
ಅವರ ಕುಟುಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಎಲ್ಲ ಸವಲತ್ತುಗಳು & ಪರಿಹಾರಗಳನ್ನು ಶೀಘ್ರವಾಗಿ ತಲುಪಿಸಲಾಗುವುದು.
— B Sriramulu (@sriramulubjp) September 16, 2020