ರಾಮನಗರ: ಕೊರೊನಾ ವೈರಸ್ ಸೋಂಕಿತ ವ್ಯಕ್ತಿಯೊಬ್ಬರು ಕೋವಿಡ್ ಆಸ್ಪತ್ರೆಯಲ್ಲಿಯೇ ನೇಣಿಗೆ ಶರಣಾದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊನ್ನನಾಯಕನಹಳ್ಳಿಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ.
Advertisement
ಹೊಸಹಳ್ಳಿ ಗ್ರಾಮದ 37 ವರ್ಷದ ವ್ಯಕ್ತಿಗೆ ಕೋವಿಡ್ 19 ಪಾಸಿಟಿವ್ ಬಂದಿತ್ತು. ಕಳೆದ ನಾಲ್ಕು ದಿನಗಳ ಹಿಂದೆ ವ್ಯಕ್ತಿಗೆ ಪಾಸಿಟಿವ್ ಬಂದು ತಾಲೂಕಿನ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಅವರು ಮನನೊಂದು ಕೋವಿಡ್ ಆಸ್ಪತ್ರೆಯ ಕೋಣೆಯಲ್ಲಿ ತಡರಾತ್ರಿ ನೇಣಿಗೆ ಶರಣಾಗಿದ್ದಾರೆ.
Advertisement
Advertisement
ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement