ಮಡಿಕೇರಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಮನೆಯಿಂದ ಹೊರ ಬರಲು ಅತಂಕ ಪಡುತ್ತಿದ್ದಾರೆ. ಈ ನಡುವೆ ಸಾರ್ವಜನಿಕರ ಸೇವೆಗಾಗಿ ಲಭ್ಯವಿರುವ ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿಗೂ ಕೊರೊನಾ ಬಿಸಿ ತಟ್ಟಿದೆ. ಕಚೇರಿಯಲ್ಲಿ ಕಾರ್ಯನಿರ್ವಾಹಿಸುವ ಐದು ಮಂದಿ ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದೆ.
Advertisement
ನಗರದಲ್ಲಿರುವ ಜಿಲ್ಲಾಢಳಿತ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 7 ಜನರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಇದೀಗ ಜಿಲ್ಲಾಧಿಕಾರಿ ಸಹಿತ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇತರ ಸಿಬ್ಬಂದಿಗಳಿಗೆ ಆತಂಕ ಎದುರಾಗಿದೆ.
Advertisement
Advertisement
ಕೊಡಗಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಇರುವ ಸರ್ಕಾರಿ ಅಸ್ಪತ್ರೆಗಳಲ್ಲಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಇಂದು ಸುಂಟಿಕೊಪ್ಪ, ಕುಶಾಲನಗರ ಮತ್ತು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಕುಶಾಲನಗರ ಮತ್ತು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಆಕ್ಸಿಜನ್ ನಿರ್ವಹಣಾ ವ್ಯವಸ್ಥೆಗಳನ್ನು ಪರಿಶೀಲಿಸಿ ಮಾಹಿತಿ ಪಡೆದರು.
Advertisement
ಬಳಿಕ ಕುಶಾಲನಗರದ ಲಸಿಕಾ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಬಳಿಕ ಕೂಡಿಗೆಯ ಮೊರಾರ್ಜಿ ವಸತಿ ಶಾಲೆಯಲ್ಲಿ ತೆರೆಯಲಾಗಿರುವ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿದರು. ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕುಗಳಲ್ಲಿ ತೆರೆಯಲಾಗಿರುವ ಕೋವಿಡ್ ಕಂಟೈನ್ಮೆಂಟ್ ವಲಯಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಸರಿಪಡಿಸುವುದಾಗ ಭರವಸೆ ನೀಡಿದರು. ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಜೊತೆಗಿದ್ದರು.