ಧಾರವಾಡ: ಶಿವಮೊಗ್ಗದಲ್ಲಿ ಭಾರೀ ಸ್ಫೋಟ ಉಂಟಾಗಿ ಸಾವು-ನೋವು ಸಂಭವಿಸಿದ ಬೆನ್ನಲ್ಲೇ ಧಾರವಾಡದಲ್ಲಿ ಕ್ರಷರ್ಗಳ ಮೇಲೆ ಆಂತರಿಕ ಭದ್ರತಾ ವಿಭಾಗ (ಐಎಸ್ಡಿ) ದಾಳಿ ನಡೆಸಿದೆ.
Advertisement
ದಾಳಿ ವೇಳೆ 234 ಜಿಲೆಟಿನ್ ಕಡ್ಡಿ ಸೇರಿದಂತೆ ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಡೆ ಒಡೆಯಲು ಮಾಲೀಕ ಸ್ಫೋಟಕಗಳನ್ನು ಸಂಗ್ರಹಿಸಿದ್ದ. ಈ ಹಿನ್ನೆಲೆಯಲ್ಲಿ ಕ್ರಷರ್ ಮಾಲೀಕ ವಿರೇನ್ಗೌಡ ಪಾಟೀಲ್ ಮೇಲೆ ಕೇಸ್ ದಾಖಲಿಸಲಾಗಿದೆ. ಈ ಸಂಬಂಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Advertisement
ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಬಳಿ ಸಂಭವಿಸಿದ ಬ್ಲಾಸ್ಟ್ನಿಂದಾಗಿ ಭಾರೀ ಪ್ರಮಾಣದ ಹಾನಿ ಸಂಭವಿಸಿದ್ದು, ಹಲವು ಕಾರ್ಮಿಕರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸದ್ಯ ಐವರ ಮೃತದೇಹಗಳು ಪತ್ತೆಯಾಗಿವೆ. ಸ್ಫೋಟದಿಂದ ಜೀವ ಹಾನಿ ಜೊತೆಗೆ ಆಸ್ತಿ ಪಾಸ್ತಿ ಸಹ ಹಾನಿಯಾಗಿದ್ದು, 150ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಅಲ್ಲದೆ 1,422 ಕುಟುಂಬಗಳಿಗೆ ತೊಂದರೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿತ್ತು.
Advertisement
ಜಿಲ್ಲೆಯ ಅಬ್ಬಲೆಗೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 150ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಹೂಣಸೊಂಡ, ಬಸವನಗಂಗೂರು, ಕಲ್ಲುಗಂಗೂರು, ಅಬ್ಬಲಗೆರೆಯಲ್ಲಿ 150 ಕ್ಕು ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಅಬ್ಬಲಗೆರೆ ಸೇರಿ ಒಟ್ಟು 7 ಗ್ರಾಮಗಳಲ್ಲಿ ಕ್ರಷರ್ ಗಳದ್ದೇ ಸಾಮ್ರಾಜ್ಯ ಎನ್ನುವಂತಾಗಿದ್ದು, ಹೂಣಸೊಂಡದಲ್ಲಿ ಆಪಾರ ಪ್ರಮಾಣದ ಹಾನಿ ಸಂಭವಿಸಿದೆ.