ಶಿವಮೊಗ್ಗ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಮೂರು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಜಯನಗರ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ತಿಲಕ್ ನಗರದ ಮೊಬೈಲ್ ಅಂಗಡಿಯೊಂದರ ಮೇಲೆ ದಾಳಿ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ 2.21 ಲಕ್ಷ ರೂ. ನಗದು ಹಾಗೂ 3 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
Advertisement
Advertisement
ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ಬೆಟ್ಟಿಂಗ್ನಲ್ಲಿ ತೊಡಗಿದ್ದ ಅಂಗಡಿ ಮಾಲೀಕ ಅಜೇಯ (35), ಕಿರಣ್ (32), ಹಾಗೂ ಸಂದೀಪ್ (28) ಮೂವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.