ಬೊಮ್ಮನಹಳ್ಳಿ(ಆನೇಕಲ್): ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಜನ ಬಡ ಕಾರ್ಮಿಕರು ಒಂದು ಹೊತ್ತಿನ ಊಟಕ್ಕೂ ಪರದಾಟ ನಡೆಸುವಂತಾಗಿದೆ. ಇದನ್ನು ಅರಿತ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಮನೆ ಮನೆಗೆ ತೆರಳಿ ಕ್ಷೇತ್ರದ ಜನರಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನ ವಿತರಣೆ ಮಾಡಿದ್ದಾರೆ.
Advertisement
ಇಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ 65 ಸಾವಿರ ಬಡ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ವಿತರಿಸುವ ಕಾರ್ಯಕ್ಕೆ ಇಂದು ಹೊಂಗಸಂದ್ರದಲ್ಲಿ ಶಾಸಕ ಸತೀಶ್ ರೆಡ್ಡಿ ಚಾಲನೆ ನೀಡಿ ಆಹಾರ ಸಾಮಗ್ರಿಗಳ ಕಿಟ್ ಗಳನ್ನ ವಿತರಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಕ್ಷೇತ್ರದ ವಾರ್ಡುಗಳಲ್ಲಿ ತಲಾ ಏಳು ಸಾವಿರ ಬಡ ಕುಟುಂಬಗಳನ್ನು ಗುರುತಿಸಲಾಗಿದೆ. ಇಂದಿನಿಂದ ಸಂಕಷ್ಟದಲ್ಲಿರುವ ಜನರ ಮನೆ ಬಾಗಿಲಿಗೆ ಆಹಾರ ಧಾನ್ಯ ಕಿಟ್ ತಲುಪಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.
Advertisement
Advertisement
ಕೊರೊನಾ ನಿಯಂತ್ರಣಕ್ಕೆ ಲಾಕ್ಡೌನ್ ಅನಿವಾರ್ಯವಾಗಿದ್ದು, ಇದರಿಂದ ಬಡವರ ಬದುಕು ಕಷ್ಟಕ್ಕೆ ಸಿಲುಕಿದ್ದು, ಶಾಸಕನಾಗಿ ಜನರ ನೆರವಿಗೆ ನಿಲ್ಲುವುದು ನನ್ನ ಕರ್ತವ್ಯ. ಕ್ಷೇತ್ರದ ಜನ ಯಾರೂ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಈ ಕಾರ್ಯಕ್ಕೆ ಮುಂದಾಗಿದ್ದೇನೆ. ಒಂದು ವೇಳೆ ಸರ್ಕಾರ ಲಾಕ್ಡೌನ್ ಮುಂದುವರಿಸಲು ತೀರ್ಮಾನಿಸಿದ್ದಲ್ಲಿ ಸರ್ಕಾರವೂ ಜನರ ನೆರವಿಗೆ ನಿಲ್ಲುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
Advertisement
ಆಹಾರ ಸಾಮಗ್ರಿಗಳ ಕಿಟ್ ಪಡೆದ ಮಹಿಳೆ ರೇಣುಕಾ ಮಾತನಾಡಿ, ನಾನು ಗಾರ್ಮೆಂಟ್ಸ್ ಕಂಪನಿಯಲ್ಲಿ ಪೀಸ್ ವರ್ಕ್ ಕೆಲಸ ಮಾಡುತ್ತಿದ್ದೆ, ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದೇ ಊಟಕ್ಕೂ ತುಂಬಾ ತೊಂದರೆ ಆಗಿತ್ತು. ಕಿಟ್ ಕೊಡುತ್ತಿರುವುದರಿಂದ ಒಂದಷ್ಟು ದಿನ ದೂಡಬಹುದು ಎಂದು ತಿಳಿಸಿದರು.