ಬೆಂಗಳೂರು: ಸರ್ಕಾರ ಎಷ್ಟು ಬಾರಿ ಎಚ್ಚರಿಕೆ ಕೊಟ್ಟಿದ್ದರೂ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯ ದಿನೇ ದಿನೇ ಹೆಚ್ಚಾಗುತ್ತಿದೆ. ಇದೀಗ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ.
70 ವರ್ಷದ ವೃದ್ಧೆಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ. ಮಹಾಲಕ್ಷ್ಮಿ ಲೇಔಟ್ನಲ್ಲಿ ವೃದ್ಧೆಗೆ ಆರೋಗ್ಯ ಸಮಸ್ಯೆ ಕಾಣಿಸಿದೆ. ತಕ್ಷಣ ಅವರನ್ನು ವೆಸ್ಟ್ ಆಫ್ ಕಾರ್ಡ್ ರೋಡ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
Advertisement
Advertisement
ಆಸ್ಪತ್ರೆಯಲ್ಲಿ ಆಕ್ಸಿಜನ್ ಲೆವೆಲ್ ಕಡಿಮೆಯಾಗಿದೆ. ಆದರೆ ಇಲ್ಲಿ ನಾನ್ ಕೋವಿಡ್ ರೋಗಿಗಳಿಗೆ ಬೆಡ್ ಇಲ್ಲ ಎಂದು ಹೇಳಿ ವೈದ್ಯರು ಕಳುಹಿಸಿದ್ದಾರೆ. ಕೊನೆಗೆ ಇನ್ನೊಂದು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿಯೇ ವೃದ್ಧೆ ಮೃತಪಟ್ಟಿದ್ದಾರೆ.
Advertisement
ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ಬೆಡ್ ಇಲ್ಲ ಅಂತ ನೆಪ ಹೇಳಿ, ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದ ಪರಿಣಾಮ 70 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ. ಇದರಿಂದ ಸರ್ಕಾರ ಎಷ್ಟೇ ಎಚ್ಚರಿಕೆ ಕೊಟ್ಟರೂ ಖಾಸಗಿ ಆಸ್ಪತ್ರೆ ಮಾತ್ರ ಅಮಾನವೀಯವಾಗಿ ವರ್ತಿಸುತ್ತಿರುವುದು ಪದೇ ಪದೇ ಸಾಬೀತಾಗುತ್ತಿದೆ.