ಬೆಂಗಳೂರು: ಗೌರಿ ಗಣೇಶ, ಮೊಹರಂ ಸೇರಿದಂತೆ ಧಾರ್ಮಿಕ ಹಬ್ಬ ಆಚರಣೆಗೆ ಮಾರ್ಗಸೂಚಿ ಪ್ರಕಟ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮೊಹರಂ, ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದುರ್ಗಾ ಪೂಜೆ, ಮೊದಲಾದ ಹಬ್ಬಗಳನ್ನು ಆಚರಿಸುವಾಗ ಜನದಟ್ಟಣೆ ತಡೆಗಟ್ಟಲು ಕೆಲ ನಿರ್ಬಂಧಗಳನ್ನು ಜಾರಿ ಮಾಡಲಾಗಿದೆ. ಈ ಆದೇಶದ ಜೊತೆ ರಾಜ್ಯದಲ್ಲಿ ಸಾಮಾಜಿಕ, ಕ್ರೀಡಾ, ರಾಜಕೀಯ, ಶೈಕ್ಷಣಿಕ, ಸಾಂಸ್ಕೃತಿಕ ಜನ ಗುಂಪುಗೂಡುವ ಕಾರ್ಯಕ್ರಮ ನಿಷೇಧಿಸಲಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದ ರೇಷ್ಮೆ ಸೀರೆ- ಕುಗ್ರಾಮದ ನೇಕಾರನಿಗೆ ಒಲಿಯಿತು ರಾಜ್ಯ ಮಟ್ಟದ ಪ್ರಶಸ್ತಿ
Advertisement
Advertisement
ಗಣೇಶೋತ್ಸವ
– ಗಣೇಶ ಚತುರ್ಥಿಯನ್ನು ಸರಳವಾಗಿ ದೇವಾಲಯದ ಒಳಗಡೆ ಮತ್ತು ಮನೆಯಲ್ಲಿ ಆಚರಿಸಬೇಕು.
– ಗಣೇಶ ಮೂರ್ತಿಯನ್ನು ತರುವಾಗ ಮತ್ತು ವಿಸರ್ಜಿಸುವಾಗ ಯಾವುದೇ ಮೆರವಣಿಗೆ/ಮನೋರಂಜನಾ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ.
– ಗಣೇಶ ಮೂರ್ತಿಯನ್ನು ಮನೆಯಲ್ಲೇ ವಿಸರ್ಜಿಸುವುದು ಅಥವಾ ಸ್ಥಳೀಯ ಆಡಳಿತ ಸಂಸ್ಥೆ ಸೂಚಿಸುವ ಜಾಗದಲ್ಲಿ ವಿಸರ್ಜಿವುದು.
Advertisement
Advertisement
ಮೊಹರಂ:
– ಸಾರ್ವಜನಿಕ ಸ್ಥಳಗಳಲ್ಲಿ ಆಲಂಗಳನ್ನು/ ಪಂಜಾವನ್ನು ಸ್ಥಾಪಿಸುವುದನ್ನು ನಿರ್ಬಂಧಿಸಲಾಗಿದೆ.
– 60 ವರ್ಷಕ್ಕಿಂತ ಮೇಲ್ಪಟ್ಟವರು 10 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಮನೆಯಲ್ಲೇ ಪ್ರಾರ್ಥನೆ ಮಾಡಬೇಕು.
– ಕೋವಿಡ್ 19 ನಿಯಮಗಳನ್ನು ಪಾಲಿಸಿಕೊಂಡು ಮಸೀದಿಯಲ್ಲಿ ಪಾರ್ಥನೆ ಮಾಡಬಹುದು. ಹೆಚ್ಚಿನ ಜನರು ಆಗಮಿಸಿದ್ದಲ್ಲಿ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಬಹುದು.