ಮಂಗಳೂರು: ಇಲ್ಲಿನ ಗುರುಪುರದ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಕ್ಕಳ ಕುಟುಂಬಸ್ಥರಿಗೆ ಇಂದು 5 ಲಕ್ಷ ರೂಪಾಯಿಯ ಚೆಕ್ ಹಸ್ತಾಂತರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಈ ಚೆಕ್ ವಿತರಿಸಿದರು.
Karnataka: Kota Shreenivasa Poojary, in-charge minister of Dakshina Kannada, hands over cheques of Rs 5 lakhs each to the kin of the two children who died in an incident of a landslide at Gurupura in Mangaluru yesterday. pic.twitter.com/smjW5PDvR6
— ANI (@ANI) July 6, 2020
Advertisement
ಮಂಗಳೂರು ಹೊರವಲಯದ ಗುರುಪುರ ಬಳಿ ಭಾನುವಾರ ಗುಡ್ಡ ಕುಸಿತದಿಂದಾಗಿ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ್ದರು. ಎನ್ಡಿಆರೆಫ್ ಸಿಬ್ಬಂದಿ ಹಾಗೂ ಪೊಲೀಸರು ಸತತ ಕಾರ್ಯಾಚರಣೆ ನಡೆಸಿದರೂ ಮಕ್ಕಳನ್ನು ಉಳಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. 16 ವರ್ಷದ ಅಣ್ಣ ಸಫ್ವಾನ್ ಹಾಗೂ 10 ವರ್ಷದ ತಂಗಿ ಸಹಲಾ ಇಬ್ಬರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದರು.
Advertisement
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು ಇಬ್ಬರು ಮಕ್ಕಳ ಸಾವು: ಮುಖ್ಯಮಂತ್ರಿಯವರ ಸಂತಾಪ, ತಲಾ ಐದು ಲಕ್ಷ ರೂ. ಪರಿಹಾರ ಘೋಷಣೆ; ಸಂತ್ರಸ್ತರ ಸ್ಥಳಾಂತರಕ್ಕೆ ಸೂಚನೆ.#MangaloreLandslideIncident@BSYBJP pic.twitter.com/uTZ8TL47xD
— CM of Karnataka (@CMofKarnataka) July 5, 2020
Advertisement
ಈ ಸಂಬಂಧ ಟ್ವೀಟ್ ಮಾಡಿದ್ದ ಸಿಎಂ ಬಿಎಸ್ವೈ, ಸಂತಾಪ ಸೂಚಿಸಿ ಮಕ್ಕಳ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದರು. ಅಲ್ಲದೆ ಗುಡ್ಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ದುಃಖಕರ. ರಕ್ಷಣಾ ಕಾರ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲಾಧಿಕಾರಿಗಳು ಭಾಗಿಯಾಗಿದ್ದರು. ಜಿಲ್ಲಾಡಳಿತದ ಸಕಾಲಿಕ ಪ್ರಯತ್ನದ ಹೊರತಾಗಿಯೂ ಮಕ್ಕಳನ್ನು ಬದುಕಿಸಿಕೊಳ್ಳಲು ಸಾಧ್ಯವಾಗದಿರುವುದು ವಿಷಾದನೀಯ ಎಂದು ತಿಳಿಸಿದ್ದರು.