-ಶಾಸಕ, ಸಂಸದರಿಗೆ ಜಿಲ್ಲಾಧಿಕಾರಿಗಳ ಪತ್ರ
ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಸದರು, ಶಾಸಕರು ಗುದ್ದಲಿ ಪೂಜೆ ಮತ್ತು ಉದ್ಘಾಟನಾ ಕಾರ್ಯಕ್ರಮಗಳನ್ನು ಕೈ ಬಿಡುವಂತೆ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಪತ್ರ ಬರೆದಿದ್ದಾರೆ.
ಮೈಸೂರು ಜಿಲ್ಲೆಯಾದ್ಯಂತ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾವುಗಳು ಸಂಭವಿಸುತ್ತಿವೆ. ಈ ಹಿನ್ನೆಲೆ ಜನ ದಟ್ಟಣೆ ಕಾರ್ಯಕ್ರಮಗಳು ಹಾಗೂ ಜನ ಸೇರುವುದನ್ನು ಕಟ್ಟುನಿಟ್ಟಾಗಿ ತಡೆಯಬೇಕಾಗಿದೆ. ಗುದ್ದಲಿ ಪೂಜೆ/ಉದ್ಘಾಟನೆಗಳು ಹಾಗೂ ಇತರೆ ಸಮಾರಂಭಗಳ ಆಯೋಜನೆಯ್ನು ಕೈಬಿಡುವಂತೆ ಹೇಳಿದ್ದಾರೆ. ಅನಿವಾರ್ಯ ಪರಿಸ್ಥಿತಿಯಲ್ಲಿ 20 ಜನರು ಮೀರದಂತೆ ಕಾರ್ಯಕ್ರಮಗಳನ್ನು ಆಯೋಜಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪತ್ರದಲ್ಲಿ ತಿಳಿಸಿದ್ದಾರೆ.
Advertisement
Advertisement
ಜಿಲ್ಲೆಗೆ ಆಗಮಿಸುವ ಪ್ರವಾಸಿಗ ತಡೆಗಾಗಿ ಹೆಚ್.ಡಿ.ಕೋಟೆ ತಾಲೂಕು ವ್ಯಾಪ್ತಿಯಲ್ಲಿ ಬರುವ ದಮ್ಮನಕಟ್ಟೆ, ಬಂಡೀಪುರ ಹಾಗೂ ನಾಗರಹೊಳೆ ಅಭಯಾರಣ್ಯಗಳಲ್ಲಿ ಬರುವ ಎಲ್ಲ ಸಫಾರಿ ಬಂದ್ ಮಾಡಲಾಗಿದೆ. ಹೆಚ್.ಡಿ.ಕೋಟೆ ತಾಲೂಕಿನ ರೆಸಾರ್ಟ್ ಲಾಡ್ಜ್, ರೆಸಾರ್ಟ್ ಗಳನ್ನು ಜುಲೈ 10ರಿಂದ ಮುಂದಿನ ಆದೇಶದವರೆಗೂ ಪ್ರವಾಸೋದ್ಯಮ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.