ನವದೆಹಲಿ: ನಾಳೆ ಕೇಂದ್ರ ಕ್ಯಾಬಿನೆಟ್ ಪುನರ್ರಚನೆಯಾಗಲಿದ್ದು, ಕೆಲ ಸಚಿವರನ್ನು ಕೈಬಿಡುವ ಸಾಧ್ಯತೆಯಿದೆ. ಈ ಪೈಕಿ ಕರ್ನಾಟಕದಿಂದ ಇಬ್ಬರು, ಮೂವರಿಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆಯಿದೆ.
ಈಗಾಗಲೇ ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿಯವರು ನಿಧನರಾದ ಹಿನ್ನೆಲೆಯಲ್ಲಿ ಒಂದು ಸ್ಥಾನ ಖಾಲಿಯಾಗಿದೆ. ಈ ಸ್ಥಾನಕ್ಕೆ ಇಬ್ಬರು ಲಿಂಗಾಯತ ಸಂಸದರ ಹೆಸರು ಸ್ಪರ್ಧೆಯಲ್ಲಿದೆ. ರಾಜ್ಯ ರಾಜಕಾರಣದ ದೃಷ್ಟಿಯಿಂದಲೂ ಮಂತ್ರಿ ಸ್ಥಾನ ಮಹತ್ವ ಪಡೆದಿದೆ.
Advertisement
Advertisement
Advertisement
ಪಟ್ಟಿಯಲ್ಲಿ ಯಾರಿದ್ದಾರೆ?
ಉಮೇಶ್ ಜಾಧವ್(ಕಲಬುರಗಿ), ಶಿವಕುಮಾರ್ ಉದಾಸಿ(ಹಾವೇರಿ), ಬಿ.ವೈ. ರಾಘವೇಂದ್ರ(ಶಿವಮೊಗ್ಗ), ಪ್ರತಾಪ್ ಸಿಂಹ(ಮೈಸೂರು-ಕೊಡಗು), ಶೋಭಾ ಕರಂದ್ಲಾಜೆ(ಉಡುಪಿ-ಚಿಕ್ಕಮಗಳೂರು), ಭಗವಂತ್ ಖೂಬಾ(ಬೀದರ್) ಪಿ.ಸಿ. ಗದ್ದಿಗೌಡರ್(ಬಾಗಲಕೋಟೆ), ಎ. ನಾರಾಯಣಸ್ವಾಮಿ(ಚಿತ್ರದುರ್ಗ). ಇದನ್ನೂ ಓದಿ: ಯಾರೂ ನಿರೀಕ್ಷೆ ಮಾಡದವರು ಸಿಎಂ ಆಗ್ತಾರೆ: ಯತ್ನಾಳ್
Advertisement
ಬೇರೆ ಯಾರಿದ್ದಾರೆ?
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡ ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ, ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ, ರಾಜಸ್ಥಾನ ಹಾಗೂ ಮಧ್ಯಪ್ರದೇಶದ ಬಿಜೆಪಿ ಜನರಲ್ ಸೆಕ್ರೆಟರಿ ಭೂಪೇಂದ್ರ ಯಾದವ್ ಹಾಗೂ ಕೈಲಾಶ್ ವಿಜಯವರ್ಗಿಯಾ, ಬಿಜೆಪಿ ವಕ್ತಾರ ಹಾಗೂ ಅಲ್ಪ ಸಂಖ್ಯಾತ ಮುಖಂಡ ಝಪರ್ ಇಸ್ಲಾಂ ಮೋದಿ ಸಂಪುಟ ಸೇರಿಕೊಳ್ಳುವ ಸಂಭಾವ್ಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ, ಅಸ್ಸಾಂ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನವಾಲ ಅವರಿಗೂ ಮಂತ್ರಿ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯಿದೆ.
ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಲ್ಲಿನ ನಾಯಕರಿಗೆ ಜಾಸ್ತಿ ಅವಕಾಶ ಸಿಗುವ ಸಾಧ್ಯತೆಯಿದೆ. ಈ ಪೈಕಿ ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್, ಮಹಾರಾಜ ಗಂಜ್ ಸಂಸದ ಪಂಕಜ್ ಚೌಧರಿ, ವರುಣ್ ಗಾಂಧಿ ಹಾಗೂ ಮೈತ್ರಿ ಪಕ್ಷ ಅಪ್ನಾ ದಳದ ಅನುಪ್ರಿಯಾ ಪಟೇಲ್ ಹೆಸರು ಮುಂಚೂಣಿಯಲ್ಲಿದೆ.
ಒಡಿಶಾ ಸಂಸದ ಅಶ್ವಿನ್ ವೈಷ್ಣವ್, ಬಂಗಾಳದ ಮಾಜಿ ರೈಲ್ವೇ ಸಚಿವ ದಿನೇಶ್ ತ್ರಿವೇದಿ, ರಾಜ್ಯ ಸಭಾ ಸದಸ್ಯ ಅನಿಲ್ ಜೈನ್, ರಾಜಸ್ಥಾನದಿಂದ ಕಿರಿಯ ಸಂಸದ ಚೌಧರಿ, ರಾಹುಲ್ ಕಸ್ವಾನ್ ಮತ್ತು ಸಿಕಾರ್ ಸಂಸದ ಸುಮೇಧಾನಂದ ಸರಸ್ವತಿ ಕೂಡ ಕೇಂದ್ರ ಸಂಪುಟ ಸೇರಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೆಹಲಿಯಿಂದ ಸಂಸದೆ ಮೀನಾಕ್ಷಿ ಲೇಖಿ, ಬಿಹಾರದಲ್ಲಿ ಚಿರಾಗ್ ಪಾಸ್ವಾನ್ ವಿರುದ್ಧ ದಂಗೆ ಎದ್ದ ಪಶುಪತಿ ಪರಾಸ್, ಜೆಡಿಯು ನಾಮನಿರ್ದೇಶನಗಳಾದ ಆರ್.ಸಿ.ಪಿ. ಸಿಂಗ್ ಮತ್ತು ಸಂತೋಷ್ ಕುಮಾರ್ ಕೂಡ ಸಂಭಾವ್ಯ ಪಟ್ಟಿಯಲ್ಲಿದ್ದಾರೆ.