ಗದಗ: ಕೊರೊನಾ ವೈರಸ್, ನೈಟ್ ಕರ್ಫ್ಯೂ, ಟಫ್ ರೂಲ್ಸ್ ಮಧ್ಯೆಯೂ ಮುದ್ರಣ ಕಾಶಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ನಡೆಯಿತು.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸಹ ಕುಲಾಧಿಪತಿಗಳಾಗಿ ಕಾರ್ಯಕ್ರಮ ಉದ್ಘಾಟಿಸಿರು. ಈ ಘಟಿಕೋತ್ಸವದಲ್ಲಿ ಕೊರೊನಾ ನಿಯಮಗಳು ಸಂಪೂರ್ಣವಾಗಿ ಮಾಯವಾಗಿದ್ದವು. ಪ್ರಜ್ಞಾವಂತರೇ ಮೈಮರೆತು ಸ್ಯಾನಿಟೈಸರ್, ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದರು.
Advertisement
Advertisement
ಗೌರವ ಡಾಕ್ಟರೇಟ್ ಪದವಿ ಪಡೆದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಎಚ್.ಕೆ.ಪಾಟೀಲ್, ವಿ.ವಿ ಕುಲಸಚಿವ ಬಸವರಾಜ್ ಲಕ್ಕನ್ನವರ್ ಸೇರಿದಂತೆ ಅನೇಕ ಅಧಿಕಾರಿಗಳು ಜನಪ್ರತಿನಿಧಿಗಳು, ವಿ.ವಿ ಸಿಬ್ಬಂದಿ, ವಿದ್ಯಾರ್ಥಿಗಳು ಸಹ ಮಾಸ್ಕ್ ಹಾಕಿಕೊಳ್ಳದೇ ಬೆಜವಾಬ್ದಾರಿತನದಿಂದ ವರ್ತಿಸಿರುವುದು ಕಂಡು ಬಂತು. ಕೊರೊನಾ ನಿಯಮ ಪಾಲಿಸಿ ಎಂದು ಜಾಗೃತಿ ಮೂಡಿಸುವವರೇ ಈ ರೀತಿ ನಿಯಮಗಳನ್ನು ಗಾಳಿಗೆ ತೂರುವುದು ಎಷ್ಟರಮಟ್ಟಿಗೆ ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.