– ಸಮಿತಿ ಹೈಕೋರ್ಟಿಗೆ ಸಲ್ಲಿಸಿರುವ ವರದಿಯಲ್ಲೇನಿದೆ..?
ಚಾಮರಾಜನಗರ: ಜಿಲ್ಲೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್ ಸಿಕ್ಕಿದೆ.
ಹೌದು. ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎ.ಎನ್ ವೇಣುಗೋಪಾಲ ಸಮಿತಿಯು ಹೈಕೋರ್ಟ್ಗೆ ವರಿ ನೀಡಿದೆ. ವರದಿಯಲ್ಲಿ ಮೈಸೂರು ಜಿಲ್ಲಾಧಿಕಾರಿಯವರದ್ದು ಈ ಪ್ರಕರಣದಲ್ಲಿ ಯಾವುದೇ ತಪ್ಪಿಲ್ಲ ಎಂದು ತಿಳಿಸಿದೆ.
Advertisement
Advertisement
ವರದಿಯಲ್ಲಿ ಏನಿದೆ..?
ದುರಂತದಲ್ಲಿ ಮೈಸೂರು ಜಿಲ್ಲಾಧಿಕಾರಿ ತಪ್ಪಿಲ್ಲ. ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಆಕ್ಸಿಜನ್ ಪೂರೈಕೆಗೆ ತಡೆ ಒಡ್ಡಿದ್ದಾರೆ ಎಂಬ ಬಗ್ಗೆ ಸಾಕ್ಷ್ಯಗಳು ಇಲ್ಲ. ಪ್ರಕರಣಕ್ಕೆ ಚಾಮರಾಜನಗರ ಜಿಲ್ಲಾಧಿಕಾರಿ ಹೊಣೆಯಾಗಿದ್ದು, ಆಕ್ಸಿಜನ್ ವ್ಯವಸ್ಥೆ ಮಾಡಿಕೊಳ್ಳುವಲ್ಲಿ ಜಿಲ್ಲಾಡಳಿತ, ಜಿಲ್ಲಾಸ್ಪತ್ರೆ ವಿಫಲವಾಗಿದೆ. ಜಿಲ್ಲಾಡಳಿತ, ಜಿಲ್ಲಾಸ್ಪತ್ರೆ ಎಚ್ಚರವಾಗಿದ್ದರೆ ಈ ದುರಂತ ಸಂಭವಿಸುತ್ತಿರಲಿಲ್ಲ. ಆಕ್ಸಿಜನ್ ಪ್ಲ್ಯಾಂಟ್ ಚಾಮರಾಜನಗರದಿಂದ 70 ಕಿಲೋ ಮೀಟರ್ ದೂರದಲ್ಲಿದೆ. ಮೈಸೂರಿನಿಂದ ಆಕ್ಸಿಜನ್ ತುಂಬಿಸಿಕೊಂಡು ಜಿಲ್ಲಾಸ್ಪತ್ರೆಗೆ ಸಾಗಾಟ ಮಾಡಬೇಕಿತ್ತು. ಜಿಲ್ಲಾಸ್ಪತ್ರೆ, ಜಿಲ್ಲಾಡಳಿತ ಮೊದಲೇ ಎಚ್ಚೆತ್ತುಕೊಂಡಿದ್ದರೆ ಈ ದುರಂತ ಆಗ್ತಿರಲಿಲ್ಲ ಎಮದು ತಿಳಿಸಿದೆ.
Advertisement
Advertisement
ಅಲ್ಲದೆ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಆಕ್ಸಿಜನ್ ಸಿಕ್ಕಿರಲಿಲ್ಲ. ಹೀಗಾಗಿ ಸೋಂಕಿತರ ಮೆದುಳು, ದೇಹದ ಇತರೆ ಭಾಗಗಳಿಗೆ ಹಾನಿಯಾಗಿದೆ. ಆಕ್ಸಿಜನ್ ಕೊರತೆಯಿಂದ ಮೆದುಳು, ದೇಹದ ಇತರೆ ಭಾಗಗಳಿಗೆ ಹಾನಿಯಾಗಿ ಸಾವನ್ನಪ್ಪಿದ್ದಾರೆ ಎಂದು ಹೈಕೊರ್ಟಿಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿಗೆ ಕ್ಲೀನ್ಚಿಟ್ ದೊರೆತಿದೆ.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದುರಂತಕ್ಕೆ ಆಕ್ಸಿಜನ್ ಕೊರತೆ ಕಾರಣವಾಗಿದೆ. ಮೇ 2ರ ರಾತ್ರಿ 11ರಿಂದ ಮೇ 3ರ ಬೆಳಗ್ಗಿನ ಜಾವದವರೆಗೆ ಆಕ್ಸಿಜನ್ ಇರಲಿಲ್ಲ. ಜಿಲ್ಲಾಸ್ಪತ್ರೆಯ ದಾಖಲೆಯ ಪ್ರಕಾರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಇರಲಿಲ್ಲ. ಇತ್ತ ಮೂವರರಷ್ಟೇ ಆಕ್ಸಿಜನ್ ಇಲ್ಲದೇ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದರು. ಆದರೆ 36 ಮಂದಿ ಸಾವಿಗೂ ಆಕ್ಸಿಜನ್ ಕೊರತೆ ಕಾರಣ ಎನ್ನಲಾಗಿದೆ.
ಮೈಸೂರು ಡಿಸಿ ವಿರುದ್ಧ ಚಾಮರಾಜನಗರ ಡಿಸಿ ರವಿ ಆರೋಪ ಮಾಡಿದ್ದರು. ಆದರೆ ತನಿಖೆ ವೇಳೆ ಮೈಸೂರು ಡಿಸಿ ವಿರುದ್ಧದ ಆರೋಪಕ್ಕೆ ಸಾಕ್ಷ್ಯಗಳೇ ಇಲ್ಲ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಡಿಸಿ ರವಿ ವಿರುದ್ಧ ಏನ್ ಕ್ರಮಕೈಗೊಳ್ಳುತ್ತೆ ಸರ್ಕಾರ..?, ಚಾಮರಾಜನಗರ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಏನ್ ಉತ್ತರ ಕೊಡ್ತಾರೆ ಎಂಬುದನ್ನು ಕಾದು ನೋಡಬೇಕಿದೆ.