– ಕಂಟೈನ್ಮೆಂಟ್ ಝೋನ್ನಲ್ಲಿ ಕೆಲಸ ಮಾಡುತ್ತಿದ್ದ ನರ್ಸ್
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು ಮೂರು ಹೊಸ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಕೊರೊನಾ ವಾರಿಯರ್ ನರ್ಸ್ಗೂ ಸೋಂಕು ತಗುಲಿದೆ.
ದಿಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ಗೆ ಸೋಂಕು ತಗುಲಿದ್ದು, ಕೊರೊನಾ ನಿಯಂತ್ರಣಕ್ಕಾಗಿ ಕ್ವಾರಂಟೈನ್ ಕೇಂದ್ರದ ಬಳಿ ನರ್ಸ್ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಇವರ ಕೊರೊನಾ ವರದಿ ಪಾಸಿಟಿವ್ ಬಂದಿದೆ. ನರ್ಸ್ ರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
Advertisement
ಚಿಕ್ಕಬಳ್ಳಾಪುರ ನಗರದ 19ನೇ ವಾರ್ಡಿನಲ್ಲಿ ಸೀರೆ ನೇಯ್ದು ಮಾರಾಟ ಮಾಡುವ 46 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ ನಗರದ 09ನೇ ವಾರ್ಡಿನಲ್ಲಿ ಕಾಂಗ್ರೆಸ್ ಮುಖಂಡರೊಬ್ಬರ ಮಗ ಕೋಳಿ ಫಾರಂ ಮಾಲೀಕ 28 ವರ್ಷದ ವ್ಯಕ್ತಿಗೂ ಕೊರೊನಾ ದೃಢವಾಗಿದೆ. ಸದ್ಯ ಈ ಮೂವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇವರ ಮನೆಗಳ ಸುತ್ತ ಸೀಲ್ಡೌನ್ ಮಾಡಿ ಕುಟುಂಬಸ್ಥರು ಹಾಗೂ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಿ ತಪಾಸಣೆಗೆ ಓಳಪಡಿಸಲಾಗುತ್ತಿದೆ.