ಮಂಗಳೂರು: ಕೊರೊನಾ ಲಾಕ್ಡೌನ್ನಿಂದಾಗಿ ಹೆಚ್ಚಿನ ಜನ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದೇ ರೀತಿ ಹಣಕಾಸಿನ ಮುಗ್ಗಟ್ಟಿಗೆ ಒಳಗಾದ ದಂಪತಿ ನಗರದಲ್ಲಿ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ಕದ್ರಿಯ ಚೌಟಾಸ್ ಕಾಪೌಂಡ್ನ ಸುರೇಶ್ ಶೆಟ್ಟಿ ಹಾಗೂ ವಾಣಿ ಆತ್ಮಹತ್ಯೆ ಶರಣಾದವರು. ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಚಿಟ್ ಫಂಡ್ನಲ್ಲಿ ಆಗಿರುವ ನಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರಿಗೆ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.
Advertisement
Advertisement
ಸುರೇಶ್ ಶೆಟ್ಟಿ ಪ್ರಿಂಟಿಗ್ ಪ್ರೆಸ್ನಲ್ಲಿ ಕೆಲಸ ಮಾಡುತ್ತಿದ್ದರು, ಜೊತೆಗೆ ತಬಲ ವಾದಕರು ಸಹ ಆಗಿದ್ದರು. ಪತ್ನಿ ವಾಣಿ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕ್ಲಿನಿಕಲ್ ಅಸಿಸ್ಟೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ನಡುವೆ ಚೀಟಿ ವ್ಯವಹಾರ ನಡೆಸುತ್ತಿದ್ದರು. ಆದರೆ ಕಳೆದ ಒಂದೂವರೆ ವರ್ಷದಿಂದ ಕೊರೊನಾ ಕಾರಣದ ಲಾಕ್ಡೌನ್ನಿಂದ ಚೀಟಿ ವ್ಯವಹಾರದಲ್ಲಿ ನಷ್ಟ ಹೊಂದಿದ್ದರು. ಹಣ ಪಡೆದುಕೊಂಡವರು ಮರಳಿ ಕಟ್ಟದೇ ಇರುವುದರಿಂದ ಹಾಗೂ ಹಣ ಆಗಬೇಕಿದ್ದವರು ಕಿರಿಕ್ ಮಾಡುತ್ತಿದ್ದರಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಹಿಂದೂ ಧಾರ್ಮಿಕ ದತ್ತಿಯಿಂದ ಮಸೀದಿ, ಮದರಸಾಗಳಿಗೆ ತಸ್ತಿಕ್ ಭತ್ತೆ ನೀಡಲು ನಿರ್ಧಾರ- ವಿಹೆಚ್ಪಿ ವಿರೋಧ
Advertisement
ಮೊದಲು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ಗಮನಿಸಿದ ಪತಿ ಸುರೇಶ್ ವಾಣಿ ಅವರ ಸಹೋದರಿಯರಿಗೆ ಕರೆ ಮಾಡಿ ವಿಷಯ ತಿಳಿಸಿ, ತಾನೂ ಸಹ ನೊಂದಿರುವುದಾಗಿ ಹೇಳಿದ್ದಾರೆ. ಅಷ್ಟರಲ್ಲಿ ಕರೆ ಕಟ್ ಮಾಡಿ, ಮನೆ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಈ ವಿಚಾರ ಮನೆಯಲ್ಲಿದ್ದ ಮಗನಿಗೆ ತಿಳಿದಿದ್ದು, ನೋಡಿದಾಗ ಇಬ್ಬರು ಬಾರದ ಲೋಕಕ್ಕೆ ತೆರಳಿದ್ದಾರೆ.
Advertisement
ಮಂಗಳೂರಿನ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾಕ್ಡೌನ್ನ ಈ ಸಮಯದಲ್ಲಿ ಸಾಕಷ್ಟು ಜನರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಮಧ್ಯೆ ಹಲವೆಡೆ ಹೆಚ್ಚಿನ ದರದಲ್ಲಿ ಬಡ್ಡಿ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ, ಈ ರೀತಿ ಕಂಡುಬಂದರೆ ದೂರು ಕೊಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.