ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಜೈರಾಜ್ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಇದನ್ನೂ ಓದಿ: ಚಿತ್ರರಂಗದ ಸಮಸ್ಯೆಗೆ ಪರಿಹಾರ ಕೊಡುವಂತೆ ಮನವಿ ಮಾಡಿದ್ದೇವೆ: ಶಿವಣ್ಣ
Advertisement
ಕೆಲದಿನಗಳ ಹಿಂದೆ ಡಿಸಿಎಂ ಅಶ್ವಥ್ ನಾರಾಯಣ್ ಅವರನ್ನು ಶಿವಣ್ಣ ಭೇಟಿ ಮಾಡಿದ್ದರು. ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕರ್ನಾಟಕ ಚಲನಚಿತ್ರೋದ್ಯಮದ ನಿಯೋಗದ ಸದಸ್ಯರು ಭೇಟಿ ಮಾಡಿ ಚಿತ್ರೋದ್ಯಮಕ್ಕೆ ಸಂಬಂಧಿಸಿದಂತೆ ಕೆಲ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಿದರು.
Advertisement
Advertisement
ಇದೇ ವೇಳೆ ಮಾತನಾಡಿದ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್, ಚಿತ್ರೋದ್ಯಮಕ್ಕೆ ಆಗಿರುವ ನಷ್ಟದ ಬಗ್ಗೆ ಸಿಎಂ ಜೊತೆಗೆ ಮನವಿ ಮಾಡಿಕೊಂಡಿದ್ದೇವೆ. ನಮ್ಮ ಜೊತೆಗೆ ಮನವಿ ಮಾಡೋದಕ್ಕೆ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಬಂದಿದ್ದರು. ಕಲಾವಿದರು ಸಾಥ್ ಕೊಟ್ಟಿದ್ದರು. ಸಿಎಂ ಕೂಡ ಸಂಬಂಧ ಪಟ್ಟ ಅಧಿಕಾರಿಗಳ ಜೊತೆಗೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಡುವ ಮಾತು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
Advertisement
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿ @BSYBJP ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಡಿಸಿಎಂ @drashwathcn, ಕಲಾವಿದರಾದ @NimmaShivanna, ತಾರಾ ಅನುರಾಧ, @TheNameIsYash, @OfficialViji, ಕೆ.ಎಫ್.ಸಿ.ಸಿ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಮತ್ತಿತರರು ಉಪಸ್ಥಿತರಿದ್ದರು pic.twitter.com/MKk7zNVPag
— CM of Karnataka (@CMofKarnataka) September 9, 2020
ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್, ಕಲಾವಿದರಾದ ಶಿವರಾಜ್ ಕುಮಾರ್, ಯಶ್, ದುನಿಯಾ ವಿಜಯ್, ಸಾಧು ಕೋಕಿಲ, ತಾರಾ ಅನುರಾಧ, ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು, ನಿರ್ಮಾಪಕ ಕೆ.ಮಂಜು, ಹಿರಿಯ ನಿರ್ದೇಶಕ ರಾಜೇಂದ್ರ ಬಾಬು ಉಪಸ್ಥಿತರಿದ್ದರು.