ಬೆಂಗಳೂರು: ಸ್ಯಾಂಡಲ್ವುಡ್ ನಟಿ ಮೇಘನಾ ರಾಜ್, ದಿವಂಗತ ನಟ ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾವನಾತ್ಮಕವಾಗಿ ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದಾರೆ.
- Advertisement 2
ಕಷ್ಟಗಳ ಕೊನೆಯಲ್ಲಿ ಯಾವಾಗಲೂ ವಿಜಯೋತ್ಸವ ಇದ್ದೇ ಇರುತ್ತದೆ. ಬೆಂಕಿ ಇರು ಹಾದಿ ಹಲವು ವಿಷಯಗಳನ್ನು ಸಾಧಿಸುವ ಮಾರ್ಗವಾಗಿದೆ. ಆದರೆ ಪ್ರಯೋಗವು ಎಂದಿಗೂ ಸುಲಭವಲ್ಲ. ಎಲ್ಲಾ ಭರವಸೆಗಳು ಮಸುಕಾದಾಗ, ಜೀವನವೆಂಬ ಸುರಂಗದ ಕೊನೆಯಲ್ಲಿ ಯಾವಾಗಲೂ ಬೆಳಕು ಇರುತ್ತದೆ. ನನಗೆ ಆ ಬೆಳಕು ಚಿರು. ನನ್ನ ಪ್ರಯಾಣವು ಪ್ರಕಾಶಮಾನವಾಗಿ ಬೆಳೆಯಲು ಆ ಬೆಳಕಿನ ಕಡೆಗೆ ಸಾಗಬೇಕಾಗಿದೆ. HAPPY BIRTHDAY DEAR HUSBAND, ನನ್ನ ಜೀವನ, ನನ್ನ ಬೆಳಕು ನೀನು ಎಂದು ಬರೆದುಕೊಂಡು ಮೇಘನಾ ರಾಜ್ ಚಿರು ಜೊತೆಗೆ ಇರುವ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಮಹಾರಾಣಿ ಧಿರಿಸಿನಲ್ಲಿ ಮೇಘನಾ ಫುಲ್ ಮಿಂಚಿಂಗ್
- Advertisement 3
View this post on Instagram
- Advertisement 4
ಮೇಘನಾ ರಾಜ್ ಅವರ ಈ ಭಾವನಾತ್ಮಕ ಸಾಲುಗಳನ್ನು ನೋಡಿದ ಕೆಲವು ಅಭಿಮಾನಿಗಳು ಕಣ್ಣೀರು ತುಂಬಿಕೊಂಡಿದ್ದಾರೆ. ನೆಚ್ಚಿನ ನಟನನ್ನು ಮಿಸ್ ಮಾಡಿಕೊಳ್ಳುತ್ತಿರುವ ಕುರಿತಾಗಿ ಕಾಮೆಂಟ್ ಮಾಡುತ್ತಿದ್ದಾರೆ. ನಟ ಚಿರಂಜೀವಿ ಸರ್ಜಾ ಅವರು ಅಭಿಮಾನಿಗಳಿಂದ, ಕುಟುಂಬದಿಂದ ದೂರವಾಗಿರಬಹುದು. ಆದರೆ ಅವರು ನಟಿಸಿರುವ ಸಿನಿಮಾಗಳ ಮೂಲಕವಾಗಿ ಎಂದಿಗೂ ಜೀವಂತವಾಗಿದ್ದಾರೆ. ಇದನ್ನೂ ಓದಿ: ಗೊಂಬೆಗಳ ಮಧ್ಯೆ ಪುಟ್ಟ ಗೊಂಬೆಯಂತೆ ಕುಳಿತ ರಾಯನ್
ಚಿರು ಸರ್ಜಾ ಹುಟ್ಟುಹಬ್ಬದ ಹಿನ್ನಲೆ ಪತಿಯ ಸವಿನೆನೆಪಿನಾರ್ಥಕವಾಗಿ ಒಂದು ಫೋಟೋಶೂಟ್ ಮಾಡಿಸಿದ್ದಾರೆ. ರಾಜ ರಾಣಿ ಥೀಮ್ನಲ್ಲಿ ಮಾಡಿರುವ ಹೊಸ ಫೋಟೋಶೂಟ್ ಇದಾಗಿದೆ. ರಾಜ ವಿಧಿವಶರಾದ ಬಳಿಕ ರಾಣಿ, ಮಗನಿಗೆ ಆ ರಾಜನ ಬಗ್ಗೆ ತಿಳಿಸುವ ಥೀಮ್ ಅನ್ನು ಫೋಟೋಶೂಟ್ ಒಳಗೊಂಡಿದೆ. ರಾಜನ ನಿಧನದ ಬಳಿಕ ರಾಣಿ ತನ್ನ ಸಾಮ್ರಾಜ್ಯವನ್ನು ಹೇಗೆ ಸಮರ್ಥವಾಗಿ ಮುನ್ನಡೆಸುತ್ತಾಳೆ ಎಂಬ ಥೀಮ್ನಲ್ಲಿ ಮೇಘನಾ ಕಾಣಿಸಿಕೊಂಡಿದ್ದಾರೆ.