ರಾಯ್ಪುರ: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ದೊಡ್ಡ ದಾಳಿಗೆ 20 ಯೋಧರು ಹುತಾತ್ಮರಾಗಿದ್ದಾರೆ.
Advertisement
ಛತ್ತೀಸ್ಗಢದ ಟರ್ರೆಮ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಬಿಡುಬಿಟ್ಟಿರುವ ಕುರಿತು ಮಾಹಿತಿ ಕಲೆಹಾಕಿದ್ದ ನಕ್ಸಲ್ ನಿಗ್ರಹ ಪಡೆ ಸಿಆರ್ಪಿಎಫ್ ನೊಂದಿಗೆ ಜಂಟಿ ಕಾರ್ಯಾಚರಣೆಗೆ ನಡೆಸಿತ್ತು. ಸಿಆರ್ಪಿಎಫ್ನ ಕೋಬ್ರಾ ತಂಡ ಮತ್ತು ಜಿಲ್ಲಾ ಮೀಸಲು ಸಶಸ್ತ್ರಪಡೆ ಜಂಟಿ ಕಾರ್ಯಾಚರಣೆಗಿಳಿದು, ನಕ್ಸಲರ ಅಡಗುತಾಣದ ಮೇಲೆ ಶನಿವಾರ ದಾಳಿ ನಡೆಸಿದೆ. ಈ ವೇಳೆ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
Advertisement
ಭದ್ರತಾಪಡೆಗಳು ಹಾಗೂ ನಕ್ಸಲರ ನಡುವೆ ಒಟ್ಟು 4 ಗಂಟೆಗಳ ಕಾಲ ನಡೆದ ಗುಂಡಿನ ಕಾಳಗದಲ್ಲಿ 20 ಜನ ಯೋಧರು ಈಗಾಗಲೇ ಹುತಾತ್ಮರಾಗಿದ್ದು, ಯೋಧರ ಮೃತದೇಹಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದೆ. ಕಾರ್ಯಾಚರಣೆ ನಡೆದ ಸ್ಥಳಕ್ಕೆ ಭದ್ರತಾ ಪಡೆಗಳು ಆಗಮಿಸಿದ್ದು ನಾಪತ್ತೆಯಾಗಿರುವ ಯೋಧರಿಗಾಗಿ ತೀವ್ರ ಹುಡುಕಾಟ ಆರಂಭಿಸಿದೆ. ಈ ದಾಳಿಯಲ್ಲಿ 15 ಮಂದಿ ನಕ್ಸಲರು ಮೃತಪಟ್ಟಿದ್ದಾರೆ.
Advertisement
Chhattisgarh: Mortal remains of a jawan of CRPF's CoBRA battalion who lost his life in an encounter with Naxals in Sukma yesterday brought to Jagdalpur. pic.twitter.com/JmkWM33CH6
— ANI (@ANI) April 4, 2021
Advertisement
ನಿನ್ನೆ ನಡೆದ ಗುಂಡಿನ ಕಾಳಗದಲ್ಲಿ ಗಾಯಗೊಂಡಿದ್ದ 23 ಮಂದಿ ಯೋಧರನ್ನು ಬಿಜಾಪುರ ಆಸ್ಪತ್ರೆಗೆ ಹಾಗೂ 7 ಮಂದಿಯನ್ನು ರಾಯ್ಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಛತ್ತೀಸ್ಗಢ ಪೊಲೀಸ್ ಮೂಲಗಳು ಸ್ಥಳೀಯ ಮಾಧ್ಯಮಕ್ಕೆ ಮಾಹಿತಿ ನೀಡಿದೆ.
I bow to the sacrifices of our brave security personnel martyred while fighting Maoists in Chhattisgarh. Nation will never forget their valour. My condolences are with their families. We will continue our fight against these enemies of peace & progress. May injured recover soon.
— Amit Shah (@AmitShah) April 4, 2021
ಘಟನೆಯಲ್ಲಿ ಹುತಾತ್ಮರಾದ ಯೋಧರಿಗೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಸಂತಾಪ ಸೂಚಿಸಿ, ನಮ್ಮ ದೇಶವು ಯೋಧರ ಬಲಿದಾನವನ್ನು ಯಾವತ್ತು ಮರೆಯುವುದಿಲ್ಲ. ಯೋಧರ ಕುಟುಂಬದೊಂದಿಗೆ ನಾವಿದ್ದೇವೆ. ಶತ್ರುಗಳ ವಿರುದ್ಧ ಹೋರಾಟ ಮುಂದುವರಿಯಲಿ. ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿದ್ದಾರೆ.