ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಹಿಮಪಾತ ಹೆಚ್ಚಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹಾಗೂ ಹೊಸಪೇಟೆ ಮೂಲದ 10 ಮಂದಿ ಪ್ರವಾಸಿಗರು ಹೋಟೆಲ್ ನಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದಾರೆ.
Advertisement
ಹೊಸಪೇಟೆ ಹಾಗೂ ಹುಬ್ಬಳ್ಳಿ ಎರಡು ಕುಟುಂಬದ ಒಟ್ಟು 10 ಮಂದಿ ಕನ್ನಡಿಗರು ಕಳೆದ 10 ದಿನಗಳ ಹಿಂದೆ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಕಳೆದ ಮೂರು ದಿನಗಳ ಹಿಂದೆ ಜಮ್ಮುವಿನ ಸೋನಮರ್ಗ್ ನ ಖಾಸಗಿ ಹೋಟೆಲ್ ನಲ್ಲಿ ವಾಸವಾಗಿದ್ದರು. ರಾತ್ರಿ ಹೋಟೆಲ್ ನಲ್ಲಿ ವಾಸವಿದ್ದ ಕನ್ನಡಿಗರ ತಂಡ ಬೆಳಗ್ಗೆ ತಮ್ಮ ಪ್ರಯಾಣ ಆರಂಭ ಮಾಡಬೇಕಿತ್ತು. ಆದರೆ ಬೆಳಗ್ಗೆ ಹೊರಡುವ ಮುನ್ನವೇ ರಾತ್ರೋರಾತ್ರಿ ಅಪಾರ ಪ್ರಮಾಣದ ಹಿಮ ಸುರಿದ ಹಿನ್ನೆಲೆಯಲ್ಲಿ ಹೋಟೆಲ್ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.
Advertisement
Advertisement
ಕನ್ನಡಿಗರು ವಾಸವಿದ್ದ ಹೋಟೆಲ್ ಬಳಿ ಭಾರೀ ಹಿಮಪಾತವಾಗುತ್ತಿದ್ದ ಕಾರಣ ಹೋಟೆಲ್ ಸಿಬ್ಬಂದಿ ಹೊರ ಹೋಗದಂತೆ ಎಚ್ಚರಿಸಿದ್ದಾರೆ. ಹೋಟೆಲ್ ಸಿಬ್ಬಂದಿಯ ಮಾಹಿತಿಯಂತೆ ಅಲ್ಲೇ ಉಳಿದುಕೊಂಡಿದ್ದಾರೆ. ಆದರೆ ಇತ್ತ ಹಿಮಪಾತ ಮಾತ್ರ ಕಡಿಮೆ ಆಗಲೇ ಇಲ್ಲ. ಹೀಗಾಗಿ ಕಳೆದ ಮೂರು ದಿನಗಳಿಂದ ಹೋಟೆಲ್ ನಲ್ಲಿಯೇ ಉಳಿದುಕೊಂಡು ಸಂಕಷ್ಟಕ್ಕೊಳಗಾಗಿದ್ದಾರೆ. ಅದಲ್ಲದೇ ತಾವು ಉಳಿದುಕೊಂಡಿರುವ ಹೋಟೆಲ್ ನಲ್ಲಿ ಡೀಸಲ್ ಸಹ ಮುಗಿಯುತ್ತಾ ಬಂದಿದ್ದು, ವಿದ್ಯುತ್ ಸಂಪರ್ಕ ಸಹ ಕಡಿತವಾಗಿದೆ. ಹೀಗಾಗಿ ಕೂಡಲೇ ರಕ್ಷಣೆ ಮಾಡುವಂತೆ ಸ್ಥಳೀಯಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ.
Advertisement