ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ರಷ್ಯಾದಿಂದ ಅಪ್ಲೋಡ್ ಆಗಿದೆ ಎನ್ನಲಾಗುತ್ತಿದೆ.
ಹೌದು. ಮಂಗಳವಾರ ಮಧ್ಯಾಹ್ನ 2:20ರ ವೇಳೆಗೆ ರಷ್ಯಾದಿಂದ ವಿಡಿಯೋ ಅಪ್ಲೋಡ್ ಮಾಡಿರುವ ವಿಚಾರ ಬೆಂಗಳೂರು ಪೊಲೀಸರ ಪ್ರಾಥಮಿಕ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಯೂಟ್ಯೂಬ್ಗೆ ಪತ್ರ ಬರೆದು ಮತ್ತಷ್ಟು ವಿವರ ಸಂಗ್ರಹಿಸಲು ಮುಂದಾಗಿದ್ದಾರೆ ಎಂಬ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ತಿಳಿದು ಬಂದಿದೆ.
Advertisement
Advertisement
ಮಾಜಿ ಮಂತ್ರಿ ರಮೇಶ್ ಜಾರಕಿಹೊಳಿ ವಿರುದ್ಧ ಪೊಲೀಸರು ಇಲ್ಲಿಯವರೆಗೆ ಎಫ್ಐಆರ್ ದಾಖಲಿಸಿಕೊಂಡಿಲ್ಲ. ಸಂತ್ರಸ್ತೆಯನ್ನು ಸಂಪರ್ಕಿಸಲು ಪೊಲೀಸರು ಯತ್ನಿಸುತ್ತಿದ್ದಾರೆ.
Advertisement
ದೂರುದಾರ ದಿನೇಶ್ ಕಲ್ಲಹಳ್ಳಿ, ಪೊಲೀಸರಿಗೂ ಸಂತ್ರಸ್ತೆಯ ವಿಳಾಸ ಮತ್ತು ಇತರೆ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಹೀಗಾಗಿ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ದಿನೇಶ್ ಕಲ್ಲಹಳ್ಳಿಗೆ ನೊಟೀಸ್ ಜಾರಿ ಮಾಡಿದ್ದು, ನಾಳೆ ಬೆಳಗ್ಗೆ 11ಕ್ಕೆ ವಿಚಾರಣೆಗೆ ಬರಲು ಸೂಚಿಸಿದ್ದಾರೆ.
Advertisement
ದಿನೇಶ್ ಕಲ್ಲಹಳ್ಳಿಗೆ ಈ ವಿಡಿಯೋವನ್ನು ಕೊಟ್ಟಿದ್ದು ಯಾರು? ಯಾವಾಗ ಕೊಟ್ಟಿದ್ದಾರೆ. ದಿನೇಶ್ ಹೇಳುತ್ತಿರುವುದು ನಿಜವೇ ಎಂಬುದನ್ನು ಪೊಲೀಸರು ಕೆದಕುತ್ತಿದ್ದಾರೆ. ದಿನೇಶ್ ಕಾಲ್ ಡಿಟೇಲ್ಸ್ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸರು ಇದುವರೆಗೂ ಎಫ್ಐಆರ್ ದಾಖಲಿಸದ ಬಗ್ಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಪಕ್ಷದ ವಕ್ತಾರ ಸಂಕೇತ್ ಏಣಗಿ ಮಾತನಾಡಿ, ಕ್ರಿಮಿನಲ್ ಕಾನೂನಿನ ಪ್ರಕಾರ, ಯಾರು ಬೇಕಾದರೂ ದೂರು ನೀಡಬಹುದು. ಸುಪ್ರೀಂಕೋರ್ಟ್ ಕೂಡಾ ಇದನ್ನು ಹೇಳಿದೆ. ಕೂಡಲೇ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಸಲೀಲೆ ಸಿಡಿ ಬಗ್ಗೆ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆ ಮಾಡಿಸಬೇಕು ಅಂತಾ ಆಗ್ರಹಿಸಿದ್ದಾರೆ. ಒಂದು ವೇಳೆ ರಮೇಶ್ ಜಾರಕಿಹೊಳಿ ಏನಾದರೂ ದೂರು ನೀಡಿದಲ್ಲಿ, ಇಡೀ ಪ್ರಕರಣಕ್ಕೆ ಬ್ಲಾಕ್ಮೇಲ್ ಟ್ವಿಸ್ಟ್ ಸಿಗಲಿದೆ ಎನ್ನಲಾಗುತ್ತಿದೆ.