ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಗೋಪಾಲಯ್ಯ ಮತ್ತು ಶಾಸಕ ಮಹೇಶ್ ಕುಮಟಳ್ಳಿಯಯವರಿಗೆ ಸಿಹಿ ಸುದ್ದಿ ಸಿಕ್ಕಿದೆ.
ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿಗೆ ಬೆಳಗಾವಿ, ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಅವರಿಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವನ್ನು ನೀಡಲಾಗಿದೆ. ಮಹೇಶ್ ಕುಮಟಳ್ಳಿಗೆ ಕರ್ನಾಟಕ ಕೊಳಗೆರೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
Advertisement
Advertisement
ಶಾಸಕ ಮಹೇಶ್ ಕುಮಟಳ್ಳಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಜೊತೆಗೆ ಸಂಪುಟ ದರ್ಜೆ ಸ್ಥಾನಮಾನವನ್ನು ಸಿಎಂ ಯಡಿಯೂರಪ್ಪ ನೀಡಿದ್ದಾರೆ.
Advertisement
ನನ್ನನ್ನು ಬೆಳಗಾವಿ ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದಕ್ಕೆ ಸಿಎಂಗೆ ನಾನು ಆಭಾರಿಯಾಗಿದ್ದೇನೆ. ಜಿಲ್ಲೆಯ ಶಾಸಕರ ಸಹಕಾರ ಪಡೆದು ತೆರೆದ ಮನಸ್ಸಿನಿಂದ ಜಿಲ್ಲೆಯ ಅಭಿವೃದ್ಧಿಗೆ ಶ್ರಮ ವಹಿಸುತ್ತೇನೆ. ರಾಷ್ಟ್ರೀಯ ನಾಯಕರು ಹಾಗೂ ರಾಜ್ಯ ನಾಯಕರಿಗೆ ನಾನು ಸದಾ ಚಿರ ಋಣಿಯಾಗಿರುತ್ತೇನೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ಸಿಎಂಗೆ ರಮೇಶ್ ಜಾರಕಿಹೊಳಿ ಧನ್ಯವಾದ ತಿಳಿಸಿದ್ದಾರೆ.
Advertisement
ಕಾಂಗ್ರೆಸ್ಸಿಗೆ ಜಾರಕಿಹೊಳಿ, ಕುಮಟಳ್ಳಿ ರಾಜೀನಾಮೆ ನೀಡಿದರೆ ಜೆಡಿಎಸ್ ಗೆ ಗೋಪಾಲಯ್ಯ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದರು. ಬಳಿಕ ನಡೆದ ಉಪಚುನಾವಣೆಯಲ್ಲಿ ಗೆದ್ದ ಜಾರಕಿಹೊಳಿಗೆ ಮತ್ತು ಗೋಪಾಲಯ್ಯಗೆ ಖಾತೆ ಹಂಚಿಕೆ ಆಗಿದ್ದರೆ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಕುಮಟಳ್ಳಿಗೆ ಯಾವುದೇ ಖಾತೆ ಹಂಚಿಕೆ ಆಗಿರಲಿಲ್ಲ. ಈಗ ಕೊಳಗೆರೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹುದ್ದೆಯ ಜೊತೆ ಸಂಪುಟ ದರ್ಜೆಯ ಸ್ಥಾನಮಾನವನ್ನು ಯಡಿಯೂರಪ್ಪ ನೀಡುವ ಮೂಲಕ ಈ ಹಿಂದೆ ನೀಡಿದ್ದ ಮಾತನ್ನು ಉಳಿಸಿಕೊಂಡಿದ್ದಾರೆ.