ಕೋಲಾರ: ಚೋಳರ ಕಾಲದ ಸುಮಾರು 900 ವರ್ಷಗಳ ಪುರಾತನ ಶ್ರೀಕಾಶಿ ವಿಶ್ವನಾಥಸ್ವಾಮಿ ದೇವಾಲಯದ ಜೀರ್ಣೋದ್ಧಾರ ಮತ್ತು ಮಹಾಕುಂಭಾಭಿಷೇಕ ಕಾರ್ಯಕ್ರಮ ನಡೆಯುತ್ತಿದ್ದು, ಗಣ್ಯಾತಿಗಣ್ಯರು ಭಾಗವಹಿಸುತ್ತಿದ್ದಾರೆ.
Advertisement
ಇಂದಿನಿಂದ ಮೂರು ದಿನಗಳ ಕಾಲ ಕೋಲಾರ ತಾಲೂಕು ಕೋರಗೊಂಡಹಳ್ಳಿ ಕೋನೆಪುರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪುರಾತನ ದೇವಾಲಯದ ಉದ್ಘಾಟನೆ ನಡೆಯಲಿದ್ದು, ಗಣ್ಯರು ಭಾಗವಹಿಸುತ್ತಿದ್ದಾರೆ. ಚೋಳರ ಕಾಲದ ಸುಮಾರು 900 ವರ್ಷಗಳಷ್ಟು ಪುರಾತನ ಶ್ರೀಕಾಶಿ ವಿಶ್ವನಾಥಸ್ವಾಮಿ ದೇವಾಲಯದ ಜೀರ್ಣೋದ್ಧಾರ ಮತ್ತು ಮಹಾಕುಂಭಾಭಿಷೇಕವನ್ನು ಇಂದಿನಿಂದ ಹಮ್ಮಿಕೊಳ್ಳಲಾಗಿದೆ.
Advertisement
Advertisement
ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗಿದೆ. ಚೋಳರ ಕಾಲದ ಅತ್ಯಂತ ಪುರಾತನ ದೇವಾಲಯ ಇದಾಗಿದ್ದು, 2013 ರಲ್ಲಿ ಕೆಡವಿ ಸುಮಾರು 8 ವರ್ಷಗಳ ಕಾಲ ಅನೇಕ ದಾನಿಗಳ ಸಹಾಯದಿಂದ ದೇವಾಲಯವನ್ನು ಜೀರ್ಣೋದ್ಧಾರ ಮಾಡಲಾಗಿದೆ. ಇದಕ್ಕೆ ಹಲವು ಸ್ನೇಹಿತರು ಹಾಗೂ ಗ್ರಾಮದ ಎಲ್ಲರೂ ಸಹಾಯ ಮಾಡಿದ್ದಾರೆ. ಹೀಗಾಗಿ ಕಾರ್ಯಕ್ರಮಕ್ಕೆ ಸಿನಿಮಾ ನಟರು ಹಾಗೂ ರಾಜಕಾರಣಿಗಳ ದಂಡು ಆಗಮಿಸುತ್ತಿದೆ. ಮೂರು ದಿನಗಳ ಕಾಲ ನಡೆಯುವ ಅದ್ಧೂರಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
Advertisement
ಭಾನುವಾರ ಹಾಗೂ ಸೋಮವಾರ ಕೋಲಾರಕ್ಕೆ ಪವರ್ ಸ್ಟಾರ್ ಪುನಿತ್ ರಾಜ್ಕುಮಾರ್, ಕಿಚ್ಚ ಸುದೀಪ್ ಸೇರಿದಂತೆ ಖ್ಯಾತ ಸಿನಿಮಾ ನಟರು ಹಾಗೂ ರಾಜಕಾರಣಿಗಳು ಆಗಮಿಸಲಿದ್ದಾರೆ. ಭಾನುವಾರ ಸಂಜೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಹ ಆಗಮಿಸಲಿದ್ದಾರೆ.
ಸಂಗೀತ ನಿರ್ದೇಶಕ ಗುರುಕಿರಣ್ ಹಾಗೂ ಗಾಯಕ ವಿಜಯ್ ಪ್ರಕಾಶ್ ಸಾರಥ್ಯದಲ್ಲಿ ಸಂಗೀತ ರಸಸಂಜೆ ಕಾರ್ಯಕ್ರಮ ನಡೆಯಲಿದೆ. ಮಾ-8 ರಂದು ಬೆಳಗ್ಗೆ ನಡೆಯುವ ಮಹಾಕುಂಭಾಭಿಷೇಕ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಶಾಖಾ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಹಾಗೂ ನಟ ಕಿಚ್ಚ ಸುದೀಪ್, ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಸೇರಿದಂತೆ ಅನೇಕ ಸಚಿವರು, ಶಾಸಕರು, ಗಣ್ಯರು ಆಗಮಿಸಲಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮಕ್ಕೆ ಸುಮಾರು 5 ಸಾವಿರ ಮಂದಿ ಭಾಗವಹಿಸಲಿದ್ದಾರೆ. ಬೆಂಗಳೂರು ದಕ್ಷಿಣ ಡಿಸಿಪಿ ದೇವರಾಜ್ ಅವರು ಹುಟ್ಟೂರು ಇದಾಗಿದ್ದು, ಅವರ ನೇತೃತ್ವದಲ್ಲೇ ದೇವಸ್ಥಾನ ಜೀರ್ಣೋದ್ಧಾರವಾಗಿದೆ.