-ಉಸಿರಾಟದ ಸಮಸ್ಯೆಯಿಂದ ಸೋಂಕಿತನ ಒದ್ದಾಟ
ಹಾವೇರಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿವೆ. ಐವತ್ತು ವರ್ಷದ ಕೊರೊನಾ ಸೋಂಕಿತನನ್ನ ಆಸ್ಪತ್ರೆಗೆ ಶಿಫ್ಟ್ ಮಾಡದೆ ನಿರ್ಲಕ್ಷ್ಯ ಮಾಡಿದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹಿರೇಮುಗದೂರು ಗ್ರಾಮದಲ್ಲಿ ನಡೆದಿದೆ.
ಜುಲೈ 16 ರಂದು ಸೋಂಕಿತರ ವ್ಯಕ್ತಿ ಜಿಲ್ಲಾಸ್ಪತ್ರೆಗೆ ತೆರಳಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. 9 ದಿನದ ಬಳಿಕ ಜುಲೈ 25ರಂದು ವರದಿ ಬಂದಿದ್ದು, ಸೋಂಕು ತಗುಲಿರೋದು ದೃಢವಾಗಿದೆ. ಗಂಟಲು ದ್ರವದ ಮಾದರಿ ನೀಡಿದ್ದಾಗಿನಿಂದ ಸೋಂಕಿತ ಮನೆಯಲ್ಲಿಯೇ ಐಸೋಲೇಶನ್ ನಲ್ಲಿದ್ದಾರೆ. ಶನಿವಾರ ಮಧ್ಯಾಹ್ನವೇ ವರದಿ ಬಂದಿದ್ದರೂ ಸೋಂಕಿತನನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವಲ್ಲಿ ಆರೋಗ್ಯ ಇಲಾಖೆ ನಿರ್ಲಕ್ಷ್ಯ ಮಾಡಿದೆ.
Advertisement
Advertisement
ಕೆಮ್ಮು, ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಮನೆಯ ಕೊಠಡಿಯಲ್ಲಿ ಸೋಂಕಿತ ಒದ್ದಾಡ್ತಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಸೋಂಕಿತನ ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.