ಬೆಂಗಳೂರು: ಜುಲೈ 19ರಿಂದ 23ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಹಲವೆಡೆ ಬಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಜುಲೈ 19-20ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Advertisement
Advertisement
ಜುಲೈ 23ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಾವಣಗೆರೆ, ಕೊಡಗು, ಮೈಸೂರಿನಲ್ಲಿ ಯಲ್ಲೋ ಅಲರ್ಟ್, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಚಿತ್ರದುರ್ಗ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರಿನಲ್ಲೂ ಮಳೆಯಾಗುತ್ತಿದೆ. ಇದನ್ನೂ ಓದಿ: ಯಡಿಯೂರಪ್ಪ ಬದಲಾವಣೆ ಬಗ್ಗೆ ವರ್ಷದ ಹಿಂದೆಯೇ ಹೇಳಿದ್ದೆ, ಅದು ಈಗ ನಿಜವಾಗ್ತಿದೆ: ಸಿದ್ದರಾಮಯ್ಯ
Advertisement
ಬೆಂಗಳೂರಿನಲ್ಲಿಯೂ ಮುಂದಿನ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.