ತಿರುವನಂತಪುರಂ: ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಸದ್ಯ ತೆರೆಯದಿರಲು ನಿರ್ಧರಿಸಿದೆ. ಇಂದು ನಡೆದ ಮಹತ್ವದ ಸಭೆ ಬಳಿಕ ಈ ನಿರ್ಧಾರವನ್ನು ಕೇರಳದ ದೇವಸ್ವಂ ಖಾತೆ ಸಚಿವ ಕಡಕಂಪಲ್ಲಿ ಸುರೇಂದ್ರನ್ ಪ್ರಕಟಿಸಿದ್ದಾರೆ.
ಜೂನ್ 14ರಿಂದ ಮಾಸಿಕ ಪೂಜೆ ಆರಂಭವಾಗಬೇಕಿದ್ದು, ದೇವಸ್ಥಾನ ತೆರೆಯುವ ಸಂಬಂಧ ತಿರುವಾಂಕೂರು ದೇವಸ್ವಂ ಮಂಡಳಿ ಸಭೆ ನಡೆಸಿತು. ಈ ಸಭೆಯಲ್ಲಿ ಕೇರಳದ ದೇವಸ್ವಂ ಖಾತೆ ಸಚಿವ ಕಡಕಂಪಲ್ಲಿ ಸುರೇಂದ್ರನ್ ಸೇರಿದಂತೆ ಎಲ್ಲ ಅರ್ಚಕರು ಭಾಗಿಯಾಗಿದ್ದರು.
Advertisement
Advertisement
ಭಾರತ ಅನ್ಲಾಕ್ ಬಳಿಕ ಧಾರ್ಮಿಕ ಕ್ಷೇತ್ರಗಳನ್ನು ತೆರೆಯಲು ಷರತ್ತುಗಳೊಂದಿಗೆ ಅವಕಾಶ ನೀಡಿತ್ತು. ಈ ಹಿನ್ನೆಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ತೆರೆಯುವ ಸಂಬಂಧ ಚರ್ಚೆ ನಡೆಸಲಾಯಿತು. ಜೂನ್ 14ರಿಂದ ಶಬರಿಮಲೆಯಲ್ಲಿ ಮಾಸಿಕ ಪೂಜೆ ನಡೆಸಬೇಕಿತ್ತು. ಈ ಪೂಜೆ ನಡೆದರೆ ಕೇವಲ ಕೇರಳ ಮಾತ್ರವಲ್ಲದೆ ದೇಶದ ಹಲವು ಭಾಗಗಳಿಂದ ಭಕ್ತಾಧಿಗಳು ಆಗಮಿಸುತ್ತಾರೆ. ಶಬರಿಮಲೈ ದೇವಸ್ಥಾನದಲ್ಲಿ ಮಾರ್ಗಸೂಚಿಗಳ ಪಾಲನೆ ಕಷ್ಟ. ಇದರಿಂದ ಸೋಂಕು ಹರಡುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಯಿತು.
Advertisement
Advertisement
ಈ ಹಿನ್ನೆಲೆಯಲ್ಲಿ ಶಬರಿಮಲೈ ದೇವಸ್ಥಾನ ತೆರೆಯದಿರಲು ಮತ್ತು ತಿಂಗಳ ಪೂಜೆಗೆ ಭಕ್ತಾದಿಗಳಿಗೆ ಅವಕಾಶ ನೀಡದರಿಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಇದರ ಜೊತೆಗೆ ದೇವಸ್ಥಾನ ಉತ್ಸವ ರದ್ದು ಮಾಡಲು ಕೂಡಾ ಒಮ್ಮತದ ತಿರ್ಮಾನ ತೆಗೆದುಕೊಳ್ಳಲಾಗಿದೆ.