ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಪ್ರಸಿದ್ಧ ಜೋಗ ಜಲಪಾತ ವೀಕ್ಷಣೆಗೆ ಪ್ರತಿನಿತ್ಯ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಸಾವಿರಾರು ಮಂದಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಆದರೆ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರು ಕೊರೊನಾ ನಿಯಮ ಪಾಲಿಸದೇ ಉಲ್ಲಂಘಿಸುತ್ತಿದ್ದಾರೆ. ಕೋವಿಡ್-19 ನಿಯಮ ಉಲ್ಲಂಘಿಸಿದ ಪ್ರವಾಸಿಗರಿಗೆ ಎಸ್.ಪಿ. ಕ್ಲಾಸ್ ತೆಗೆದುಕೊಂಡಿದ್ದಾರೆ.
Advertisement
ಜೋಗದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಯ ಪರಿಶೀಲನೆಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹಾಗೂ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜ್ ಇಂದು ಭೇಟಿ ನೀಡಿದ್ದರು. ಇಂದು ಸಹ ಸಾವಿರಾರು ಸಂಖ್ಯೆಯಲ್ಲಿ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರು ಆಗಮಿಸಿದ್ದರು. ಆದರೆ ಬಹುತೇಕ ಮಂದಿ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದು ಅಧಿಕಾರಿಗಳ ಗಮನಕ್ಕೆ ಬಂದಿತ್ತು.
Advertisement
Advertisement
ಈ ವೇಳೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜ್ ಅವರು ಪ್ರವಾಸಿಗರಿಗೆ ಬಿಸಿ ಮುಟ್ಟಿಸಿದರು. ಇದೇನು ಜಾತ್ರೆನಾ? ಜವಾಬ್ದಾರಿ ಇಲ್ಲವಾ ನಿಮಗೆಲ್ಲಾ ಎಂದು ಕ್ಲಾಸ್ ತೆಗೆದುಕೊಂಡರು. ಕೊರೊನಾ ಹಿನ್ನೆಲೆ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬ ಪ್ರಜ್ಞೆ ಇಲ್ಲವಾ ಎಂದು ಪ್ರಶ್ನಿಸಿದರು. ಮಾಸ್ಕ್ ಧರಿಸದೇ ಇರುವವರಿಗೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಪ್ರವಾಸಿಗರಿಗೆ ದಂಡ ವಿಧಿಸುವ ಎಚ್ಚರಿಕೆ ನೀಡಿದರು.