ಕಾರವಾರ: ಕಾರವಾರ ಶಾಸಕಿ ಶ್ರೀಮತಿ ರೂಪಾಲಿ ನಾಯ್ಕ, ಪಬ್ಲಿಕ್ ಟಿವಿ ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ಜ್ಞಾನದೀವಿಗೆಗೆ ಎರಡು ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ.
ಪಬ್ಲಿಕ್ ಟಿವಿ ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ಸರ್ಕಾರಿ ಶಾಲೆಗಳ ಎಸ್ಎಲ್ಎಲ್ಸಿ ವಿದ್ಯಾರ್ಥಿಗಳಿಗೆ ಟ್ಯಾಬ್ ನೀಡುವ ಜ್ಞಾನದೀವಿಗೆ ಕಾರ್ಯಕ್ರಮಕ್ಕೆ ಕಾರವಾರ ಮತ್ತು ಅಂಕೋಲ ವಿಧಾನಸಭಾ ಕ್ಷೇತ್ರದ ಶಾಸಕಿ ಶ್ರೀಮತಿ ರೂಪಾಲಿ ನಾಯ್ಕ, ಅವರು ಎರಡು ಲಕ್ಷ ರುಪಾಯಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ.
Advertisement
Advertisement
ಜ್ಞಾನ ದೀವಿಗೆ ಅಭಿಯಾನಕ್ಕೆ ಜನರ ಮೆಚ್ಚುಗೆ ವ್ಯಕ್ತವಾಗಿದ್ದು ಈ ಅಭಿಯಾನಕ್ಕೆ ಕೈ ಜೋಡಿಸುವ ಸಲುವಾಗಿ ನೂರಾರು ದಾನಿಗಳು ಸಹಾಯ ಹಸ್ತ ನೀಡಿದ್ದಾರೆ. ಇಂದಿನ ಪರಿಸ್ಥಿತಿಯಲ್ಲಿ ಮಕ್ಕಳಿಗೆ ಅವಶ್ಯಕತೆ ಇದೆ. ಈ ಟ್ಯಾಬ್ನಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹ ಸಹಾಯವಾಗಲಿದೆ. ಪಬ್ಲಿಕ್ ಟಿವಿಯ ಮುಖ್ಯಸ್ಥರಾದ ರಂಗನಾಥ್ ರವರು ತುಂಬಾ ಮುತುವರ್ಜಿವಹಿಸಿ ಈ ಕಾರ್ಯ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನಾವು ಕೂಡ ಈ ಕಾರ್ಯಕ್ಕೆ ಕೈಜೋಡಿಸಿ ನಮ್ಮಿಂದ ಎಷ್ಟು ಸಹಕಾರ ಆಗುತ್ತದೋ ಅಷ್ಟು ಸಹಾಯವನ್ನು ನಿರಂತರವಾಗಿ ಮಾಡುತ್ತೇವೆ ಎಂದಿದ್ದಾರೆ.
Advertisement
Advertisement
ಪಬ್ಲಿಕ್ ಟಿ.ವಿ ತಂಡ ಜ್ಞಾನದ ದೀಪವಾಗಿ ಬೆಳಗುತ್ತಿದೆ. ಸಮಾಜಕ್ಕೆ ಉತ್ತಮ ಕೆಲಸ ಮಾಡುವ ಮೂಲಕ ಸಂಸ್ಥೆ ಪ್ರತ್ಯೇಕವಾಗಿ ನಿಲ್ಲುತ್ತದೆ. ಇಡೀ ಪಬ್ಲಿಕ್ ಟಿವಿ ಬಳಗವನ್ನು ಶ್ಲಾಘಿಸುತ್ತೇನೆ. ಈ ಕಾರ್ಯಕ್ರಮದಿಂದ ಎಷ್ಟೋ ಬಡ ಮಕ್ಕಳ ಜೀವನದಲ್ಲಿ ಬೆಳಕು ಕಾಣುತ್ತಿದೆ ಎಂದು ಹೇಳಿದರು.