ಶಿವಮೊಗ್ಗ : ಕೇಂದ್ರದ ನಾಯಕರು ರಾಜ್ಯದ ಇಬ್ಬರು ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ರಾಜ್ಯಸಭೆಗೆ ಆಯ್ಕೆ ಮಾಡಿರುವುದು ಸಂತಸ ಉಂಟು ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಟಿಕೆಟ್ ನೀಡುವ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ ಮಾತ್ರ ಎಂದರು. ಈ ಇಬ್ಬರು ಕಾರ್ಯಕರ್ತರು ಪಕ್ಷಕ್ಕಾಗಿ ಕಳೆದ 30-40 ವರ್ಷಗಳಿಂದ ದುಡಿದಿದ್ದಾರೆ. ಈ ಮೂಲಕ ಬಿಜೆಪಿ ಪಕ್ಷಕ್ಕಾಗಿ ದುಡಿದವರಿಗೂ ಅಧಿಕಾರ ನೀಡುತ್ತದೆ ಎಂಬುದನ್ನು ಸಾಬೀತು ಮಾಡಿದೆ. ಈ ಮೂಲಕ ಬಿಜೆಪಿ ಪಕ್ಷವನ್ನು ಟೀಕಿಸುತ್ತಿದ್ದವರಿಗೆ ಉತ್ತರ ಸಿಕ್ಕಿದೆ ಎಂದರು.
Advertisement
Advertisement
ಸಾಮಾನ್ಯ ಕಾರ್ಯಕರ್ತರನ್ನು ರಾಜ್ಯಸಭೆ ಆಯ್ಕೆ ಮಾಡಿದ ಕೇಂದ್ರ ಸಮಿತಿಯ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಹಾಗೂ ಸಂತೋಷ್ ಜೀ ಅವರಿಗೆ ನನ್ನ ಸಾಷ್ಟಾಂಗ ನಮಸ್ಕಾರ ತಿಳಿಸುತ್ತೇನೆ. ಸದ್ಯ ಕೇಂದ್ರಸಮಿತಿ ನಾಯಕರು ಇಬ್ಬರು ಅಭ್ಯರ್ಥಿಗಳನ್ನು ಮಾತ್ರ ಘೋಷಣೆ ಮಾಡಿದ್ದಾರೆ. ಮೂರನೇ ಅಭ್ಯರ್ಥಿ ಬಗ್ಗೆ ತೀರ್ಮಾನ ಮಾಡಿಲ್ಲ. ಮೂರನೇ ಅಭ್ಯರ್ಥಿ ಆಯ್ಕೆ ಬಗ್ಗೆ ಕೇಂದ್ರದ ನಾಯಕರು ನಿರ್ಧರಿಸಲಿದ್ದಾರೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.
Advertisement
https://twitter.com/BJP4Karnataka/status/1269923474828451842