ನವದೆಹಲಿ: ಟೀ ಇಂಡಿಯಾ ಚೊಚ್ಚಲ ವಿಶ್ವಕಪ್ ವಿಜೇತ ತಂಡದ ನಾಯಕರಾಗಿದ್ದ, ದಿಗ್ಗಜ ಆಟಗಾರ ಕಪಿಲ್ ದೇವ್ ಅವರಿಗೆ ಹೃದಯಘಾತವಾಗಿತ್ತು. ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.
61 ವರ್ಷದ ಕಪಿಲ್ ದೇವ್ ಅವರಿಗೆ ಸದ್ಯ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಲಾಗುತ್ತಿದೆ, ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿರುವ ವಿಚಾರವನ್ನು ಖ್ಯಾತ ಪತ್ರಕರ್ತೆ ಟೀನಾ ಠಾಕೂರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Advertisement
Legendary cricketer Kapil Dev @therealkapildev suffers heart attack, undergoes angioplasty at a hospital in Delhi. Wishing him a speedy recovery.
— Teena Thacker (@Teensthack) October 23, 2020
Advertisement
2020ರ ಐಪಿಎಲ್ ಟೂರ್ನಿಯ ಕುರಿತು ತಮ್ಮ ಅಭಿಪ್ರಾಯಗಳನ್ನು ಕಪಿಲ್ ದೇವ್ ಹಂಚಿಕೊಳ್ಳುತ್ತಿದ್ದರು. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಪಿಲ್ ದೇವ್ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಲವು ಗಣ್ಯರು, ಅಭಿಮಾನಿಗಳು ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ.
Advertisement
Wishing @therealkapildev ji a speedy recovery. Get well Soon Sir. pic.twitter.com/VNF5B60lMA
— Riteish Deshmukh (@Riteishd) October 23, 2020
Advertisement
ಟೀಂ ಇಂಡಿಯಾ ಪರ 131 ಟೆಸ್ಟ್ ಪಂದ್ಯಗಳನ್ನು ಆಡಿರುವ ಕಪಿಲ್ ದೇವ್ ಅವರು, 5,248 ರನ್ ಗಳಿಸಿದ್ದು, 8 ಶತಕಗಳನ್ನು ಸಿಡಿಸಿದ್ದಾರೆ. 225 ಏಕದಿನ ಪಂದ್ಯಗಳಲ್ಲಿ 3,783 ರನ್ ಗಳಿಸಿದ್ದಾರೆ. ಅಲ್ಲದೇ ಟೆಸ್ಟ್ ನಲ್ಲಿ 434 ವಿಕೆಟ್, ಏಕದಿನ ಮಾದರಿ ಕ್ರಿಕೆಟ್ನಲ್ಲಿ 253 ವಿಕೆಟ್ ಪಡೆದುಕೊಂಡಿದ್ದಾರೆ. 1959 ಜನವರಿ 6 ರಂದು ಚತ್ತೀಸ್ಗಢದಲ್ಲಿ ಜನಿಸಿದ್ದ ಅವರು, 1978 ರ ಅಕ್ಟೋವರ್ ನಲ್ಲಿ ಪಾಕಿಸ್ತಾನ ವಿರುದ್ಧ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು.
ಕಪಿಲ್ ದೇವ್ ಅವರ ಬದುಕಿನ ಕಥೆ ಆಧಾರವಾಗಿ ಬಾಲಿವುಡ್ನಲ್ಲಿ ’83’ ಸಿನಿಮಾ ನಿರ್ಮಾಣವಾಗಿದ್ದು, ಚಿತ್ರದಲ್ಲಿ ಕಪಿಲ್ ದೇವ್ ಪಾತ್ರದಲ್ಲಿ ರಣ್ವೀರ್ ಸಿಂಗ್ ನಟಿಸಿದ್ದಾರೆ. ಅಲ್ಲದೇ ಕಪಿಲ್ ಅವರ ಪತ್ನಿ ರೋಮಿ ಭಾಟಿಯಾ ಆಗಿ ದೀಪಿಕಾ ಪಡುಕೋಣೆ ಅಭಿನಯಿಸಿದ್ದಾರೆ. ಕೊರೊನಾ, ಲಾಕ್ಡೌನ್ ಕಾರಣದ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆ ತಡವಾಗಿದೆ.