ಕಲಬುರಗಿ: ಟ್ಯಾಂಕರ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲಬುರಗಿ ತಾಲೂಕಿನ ಕೋಟನೂರು ಬಳಿ ನಡೆದಿದೆ.
ರಾತ್ರಿ ಒಂದು ಗಂಟೆ ಸಮಯದಲ್ಲಿ ಈ ಅಪಘಾತ ನಡೆದಿದೆ. ಮೃತರನ್ನು ರಾಹುಲ್(25), ಖಾಸಿಂ(26) ಹಾಗೂ ಉಲ್ಲಾಸ್ (26) ಎಂದು ಗುರುತಿಸಲಾಗಿದೆ. ಇನ್ನೋರ್ವ ಮೃತನ ಗುರುತು ಪತ್ತೆಯನ್ನು ಪೊಲೀಸರು ಮಾಡುತ್ತಿದ್ದಾರೆ. ಮೃತರೆಲ್ಲರು ಕಲಬುರಗಿ ನಗರದ ನಿವಾಸಿಗಳು ಎನ್ನಲಾಗಿದೆ.
- Advertisement 2
- Advertisement 3
ಘಟನೆಯಲ್ಲಿ ಇನ್ನೋರ್ವನಿಗೆ ಗಂಭೀರ ಗಾಯಗಗಳಾಗಿದ್ದು, ಆತನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
- Advertisement 4
ಜೇವರ್ಗಿ ಮಾರ್ಗದಿಂದ ಕಲಬುರಗಿ ನಗರಕ್ಕೆ ಕಾರು ಬರುತ್ತಿತ್ತು. ಇತ್ತ ಟ್ಯಾಂಕರ್ ಕಲಬುರಗಿ ನಗರದಿಂದ ಜೇವರ್ಗಿ ಕಡೆ ಹೊರಟಿತ್ತು. ಈ ವೇಳೆ ಅಪಘಾತ ಸಂಭವಿಸಿದ್ದು, ಇಟೋಸ್ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಕಲಬುರಗಿ ನಗರ ಸಂಚಾರಿ 2 ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.