ನವದೆಹಲಿ: ಗಣರಾಜ್ಯೋತ್ಸವದ ಹಿನ್ನಲೆ ರಾಜ್ಯದ 5 ಮಂದಿ ಸೇರಿದಂತೆ ಒಟ್ಟು 119 ಮಂದಿಗೆ ಪದ್ಮ ಪ್ರಶಸ್ತಿ ಸಿಗಲಿದೆ. ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರು ಮರಣೋತ್ತರ ಪದ್ಮ ವಿಭೂಷಣ ಗೌರವಕ್ಕೆ ಪಾತ್ರವಾಗಿದ್ದಾರೆ.
ಕೇಂದ್ರ ಗೃಹ ಸಚಿವಾಲಯ ಇಂದು ರಾತ್ರಿ ಸಾಧಕರ ಪಟ್ಟಿಯನ್ನು ಪ್ರಕಟ ಮಾಡಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಬಿಎಂ ಹೆಗ್ಡೆ ಅವರಿಗೆ ಪದ್ಮವಿಭೂಷಣ ಸಾಹಿತ್ಯ ರಂಗದಲ್ಲಿ ಚಂದ್ರಶೇಖರ್ ಕಂಬಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ.
Advertisement
Advertisement
ಮಂಜಮ್ಮ ಜೋಗತಿ(ಕಲೆ), ರಂಗಸ್ವಾಮಿ ಲಕ್ಷ್ಮಿ ನಾರಾಯಣ ಕಶ್ಯಪ( ಸಾಹಿತ್ಯ ಮತ್ತು ಶಿಕ್ಷಣ), ಕೆವೈ ವೆಂಕಟೇಶ್(ಕ್ರೀಡೆ ) ಅವರು ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ.
Advertisement
ಸಾರ್ವಜನಿಕ ವ್ಯವಹಾರಗಳ ವಿಭಾಗದಲ್ಲಿ ಪ್ರಶಸ್ತಿ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಸಿಕ್ಕಿದೆ. ಒಟ್ಟು 7 ಮಂದಿಗೆ ಪದ್ಮ ವಿಭೂಷಣ, 10 ಮಂದಿಗೆ ಪದ್ಮಭೂಷಣ, 102 ಮಂದಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಈ ಬಾರಿ ನೀಡಲಾಗುತ್ತದೆ.
Advertisement
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಂದಿನ ದಿನಗಳಲ್ಲಿ ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ ಈ ಪ್ರಶಸ್ತಿಯನ್ನು ಸಾಧಕರಿಗೆ ನೀಡಿ ಗೌರವಿಸಲಿದ್ದಾರೆ.