– ಈ ಹಿಂದೆ ಸಂಪತ್ ರಾಜ್ ವಿಚಾರಣೆ ನಡೆಸಿದ್ದ ಪೊಲೀಸರು
ಬೆಂಗಳೂರು: ಶಾಸಕರ ಮನೆ ಹಾಗೂ ಪೊಲೀಸ್ ಠಾಣೆ ಧ್ವಂಸಗೊಳಿಸಿದ್ದ ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕಣದ ಕುರಿತು ಪೊಲೀಸರು ತೀವ್ರ ತನಿಖೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನೂ ವಿಚಾರಣೆ ನಡೆಸಿದ್ದರು. ಆದರೆ ಇದೀಗ ಇದ್ದಕ್ಕಿಂತೆ ಸಂಪತ್ ರಾಜ್ ಕಾಣೆಯಾಗಿದ್ದಾರೆ.
Advertisement
ತೀವ್ರ ಸಂಚಲನ ಸೃಷ್ಟಿಸಿದ್ದ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಹೀಗಾಗಿ ಪ್ರಕರಣಕ್ಕೆ ಮಹತ್ವದ ತಿರುವುಸಿಕ್ಕಿದೆ ಎನ್ನಲಾಗಿದ್ದು, ಇದೇ ವೇಳೆ ಸಂಪತ್ರಾಜ್ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
Advertisement
ಸಂಪತ್ರಾಜ್ಗಾಗಿ ಸಿಸಿಬಿ ಪೊಲೀಸರ ಹುಡುಕಾಟ ನಡೆಸಿದ್ದಾರೆ. ಆದರೆ ಬುಧವಾರ ನೋಟಿಸ್ ಕೊಡಲು ತೆರಳಿದ್ದಾಗ ಕಳೆದ 1 ವಾರದಿಂದ ಮನೆಯಲ್ಲಿ ಇಲ್ಲದಿರುವುದರ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೀಗಾಗಿ ನಾಳೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಪ್ರಕರಣದಲ್ಲಿ ಸಂಪತ್ ರಾಜ್ ಭಾಗಿಯಾಗಿರುವ ಕುರಿತು ಮಹತ್ವದ ಸಾಕ್ಷ್ಯ ಸಿಕ್ಕಿದೆ ಎನ್ನಲಾಗಿದ್ದು, ಅರೆಸ್ಟ್ ಆಗ್ತಾರಾ ಕಾಂಗ್ರೆಸ್ ಮುಖಂಡ ಸಂಪತ್ ರಾಜ್ ಎಂಬ ಪ್ರಶ್ನೆ ಇದೀಗ ಮೂಡಿದೆ.
Advertisement
Advertisement
ಸಂಪತ್ ರಾಜ್ ವಿರುದ್ಧ ಸ್ಫೋಟಕ ಸಾಕ್ಷ್ಯ ಸಿಕ್ಕಿದ್ದು, ಬೆಂಕಿ ಹಚ್ಚುವ ಸಂದರ್ಭದಲ್ಲಿ ಅಖಂಡ ಶ್ರೀನಿವಾಸಮೂರ್ತಿ ಮನೆಯಿಂದ 100 ಮೀಟರ್ ದೂರದಲ್ಲಿದ್ದರು. ಸಂತೋಷ್ ಮನೆಯಲ್ಲಿ ಆಶ್ರಯ ಪಡೆದಿದ್ದರು. ಆಗಸ್ಟ್ 4ರಂದು ಸಭೆ ನಡೆಸಿದ್ದ ಬಗ್ಗೆ ತಾಂತ್ರಿಕ ಮಾಹಿತಿ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಸಂಪತ್ ರಾಜ್ಗೆ ಇದೀಗ ಸಂಕಷ್ಟ ಶುರುವಾಗಿದೆ. ಪೊಲೀಸರ ಭಯದಿಂದ ಸಂಪತ್ ರಾಜ್ ಮನೆಗೆ ಸೇರದೆ ಎಸ್ಕೇಪ್ ಆಗುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೆ ಇನ್ನೂ ಅಚ್ಚರಿ ಎಂಬಂತೆ ಕಾರು ಬಿಟ್ಟು ಆಟೋದಲ್ಲಿ ಓಡಾಡುತ್ತಿದ್ದಾರೆ ಎನ್ನಲಾಗಿದೆ.