ಬೆಂಗಳೂರು: ನಗರದ ಡಿಜೆಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂದು ಸಿಸಿಬಿ ಅಧಿಕಾರಿಗಳ ಕಂಡ ಎಸ್ಡಿಪಿಐ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಗಲಭೆಯಲ್ಲಿ ಎಸ್ಡಿಪಿಐ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಈಗಾಗಲೇ 32 ಮಂದಿ ಕಾರ್ಯಕರ್ತರ ಬಂಧನವಾಗಿದೆ. ಘಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ, ಹಲಸೂರು ಗೇಟ್ನ ಎಸ್ಡಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಪೊಲೀಸರ ತಂಡ ಪರಿಶೀಲನೆ ನಡೆಸಿದೆ.
Advertisement
Advertisement
ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು, ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಸಂಬಂಧ ಮೂರು ಪ್ರಕರಣಗಳ ಸಿಸಿಬಿ ವರ್ಗಾವಣೆ ಆಗಿದ್ದವು. ಅದರ ಸಂಬಂಧ ಎಸಿಪಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹೀಗಾಗಿ ತನಿಖೆ ಭಾಗವಾಗಿ ಮೂರು ಎಸ್ಡಿಪಿಐ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ದಾಳಿ ಮುಂದುವರಿದಿದ್ದು, ಈಗ ತನಿಖಾ ಹಂತದಲ್ಲಿದ್ದು ಹೆಚ್ಚಿನ ವಿಚಾರಗಳನ್ನು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.
Advertisement
ಏಕಕಾಲಕ್ಕೆ ಮೂರು ಕಡೆಗಳಲ್ಲೂ ದಾಳಿಯಾಗಿದೆ. ಸುಮಾರು 30ಕ್ಕೂ ಹೆಚ್ಚು ಅಧಿಕಾರಿಗಳ ತಂಡಗಳಿಂದ ಮೂರು ಕಡೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಹಲಸೂರು ಗೇಟ್ನ ಎಸ್ಡಿಪಿಐನ ಮುಖ್ಯ ಕಚೇರಿ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.