ಮಡಿಕೇರಿ: ಡ್ರಗ್ಸ್ ಪ್ರಕರಣದಲ್ಲಿ ಸಚಿವರು, ಶಾಸಕರು ಇದ್ದರೂ ಒದ್ದು ಒಳಗೆ ಹಾಕಬೇಕು ಎಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದ್ದಾರೆ.
ಕೊಡಗಿನ ಬಲಮುರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯದಲ್ಲಿ ಡ್ರಗ್ಸ್ ದಂಧೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಇದರಲ್ಲಿ ಸಚಿವರು, ಶಾಸಕರಿದ್ದರೂ ಹೊದ್ದು ಒಳಗಾಕಬೇಕು. ಅದು ಕಾಂಗ್ರೆಸ್ ಶಾಸಕರಿರಲಿ, ಬಿಜೆಪಿ ಶಾಸಕರಿರಲಿ. ಡ್ರಗ್ಸ್ ದಂಧೆಯಲ್ಲಿರುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು ಎಂದು ಆಗ್ರಹಿಸಿದರು.
Advertisement
Advertisement
ಯಾವುದೇ ಚಿತ್ರ ನಟ ನಟಿಯರಾದರೂ ಒದ್ದು ಒಳಗಾಕಬೇಕು. ಡ್ರಗ್ಸ್ ದಂಧೆಯಿಂದ ಸಂಪಾದಿಸಿರುವ ಎಷ್ಟೇ ಆಸ್ತಿಯಾದರೂ ಮುಟ್ಟುಗೋಲು ಹಾಕಬೇಕು. ಐದು ಸಿನಿಮಾ ಮಾಡಿದ ಕೂಡಲೇ ಕೋಟಿ ಕೋಟಿ ಆಸ್ತಿ ಹೇಗೆ ಬರುತ್ತೆ ಎಂದು ಪ್ರಶ್ನಿಸಿದರು.
Advertisement
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಹೇಳಿಕೆಯಿಂದಾಗಿ ಮಂಗಳವಾರ ಬೆಳಗ್ಗೆ ಸಿಸಿಬಿ ಅಧಿಕಾರಿಗಳು ನಟಿ ಸಂಜನಾ ಮನೆ ಮೇಲೆ ದಾಳಿ ಮಾಡಿದ್ದರು. ಹಲವು ಗಂಟೆ ಶೋಧ ಕಾರ್ಯ ನಡೆಸಿ, ಸಂಜನಾರನ್ನು ಅರೆಸ್ಟ್ ಮಾಡಿದ್ದಾರೆ. ಎಫ್ಐಆರ್ ನಲ್ಲಿ ಸಂಜನಾರನ್ನು ಎ-14 ಎಂದು ಉಲ್ಲೇಖಿಸಲಾಗಿದೆ. ಡ್ರಗ್ಸ್ ಮಾಫಿಯಾ ಜೊತೆ ನಂಟಿರುವ ಅನುಮಾನದ ಮೇಲೆ ತೀವ್ರ ವಿಚಾರಣೆ ನಡೆಸಲಾಗಿದೆ. ಮೆಡಿಕಲ್ ಚೆಕಪ್ ಬಳಿಕ ವಸಂತನಗರದ ಸ್ಪೆಷಲ್ ರಿಮ್ಯಾಂಡ್ ಕೋರ್ಟ್ಗೆ ಹಾಜರುಪಡಿಸಿ ಸಂಜನಾರನ್ನು ಐದು ದಿನ ಕಸ್ಟಡಿಗೆ ಪಡೆದುಕೊಂಡಿದೆ.
Advertisement
ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ವಿರುದ್ಧ ಕಳೆದ ವಾರ ಯಾವುದೇ ಸಾಕ್ಷ್ಯಗಳು ಸಿಕ್ಕಿರಲಿಲ್ಲ. ಹೀಗಾಗಿ ಸೂಕ್ತ ಸಾಕ್ಷ್ಯಕ್ಕಾಗಿ ಕಾಯುತ್ತಿದ್ದರು. ಈ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ಹಲವು ಮಾಹಿತಿಗಳನ್ನು ತಿಳಿಸಿದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ನಡೆಸುತ್ತಿದ್ದ ಪೃಥ್ವಿ ಶೆಟ್ಟಿ ಕಂಪನಿಯಲ್ಲಿ ಸಂಜನಾ ಸಹ ಪಾಲುದಾರೆ ಎಂಬ ಮಾಹಿತಿ ಸಿಕ್ಕಿದೆ. ಇಬ್ಬರ ನಡುವೆ ಲಕ್ಷಾಂತರ ರೂಪಾಯಿ ವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ದಾಖಲೆಗಳನ್ನು ಕೆದಕಿದಾಗ ದೊಡ್ಡ ದೊಡ್ಡ ಹೋಟೆಲ್ಗಳಲ್ಲಿ ಪಾರ್ಟಿಗಳನ್ನು ಆಯೋಜನೆ ಮಾಡಿದ ಬಗ್ಗೆ ಮಾಹಿತಿ ಲಭ್ಯವಾಗಿದೆ.