ಬೆಂಗಳೂರು: ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕದೇ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಪಥ ಮಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಮ್ಮ ಪಕ್ಷದಿಂದ ಹಮ್ಮಿಕೊಂಡಿರುವ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಮೂಲಕ ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆನೇ ಇಲ್ಲ ಎಂದಿದ್ದಾರೆ.
Advertisement
ನಮ್ಮ ಪಕ್ಷದಿಂದ ಹಮ್ಮಿಕೊಂಡಿರುವ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಮೂಲಕ ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆನೆ ಇಲ್ಲ.
1/2
— Nalinkumar Kateel (@nalinkateel) September 5, 2020
Advertisement
ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಅವರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗುವುದು ಎಂದು ಗೃಹಸಚಿವರ ಹೇಳಿಕೆಯನ್ನು ನಮ್ಮ ಕಾರ್ಯಕರ್ತರು, ಪ್ರಜ್ಞಾವಂತ ನಾಗರಿಕರು ಸ್ವಾಗತಿಸಿದ್ದಾರೆ. ಎಷ್ಟೇ ಪ್ರಭಾವಿ ವ್ಯಕ್ತಿಯಾದರೂ ಈ ನೆಲದ ಕಾನೂನನ್ನು ಮುರಿದರೆ ಕ್ಷಮಿಸಲು ಸಾಧ್ಯವೇ ಇಲ್ಲ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
Advertisement
Advertisement
ಸ್ಯಾಂಡಲ್ವುಡ್ ನಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿ ದ್ವಿವೇದಿ, ಆಪ್ತ ರವಿಶಂಕರ್ ಹಾಗೂ ಸಂಜನಾ ಗಲ್ರಾನಿ ಆಪ್ತ ರಾಹುಲ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಯುತ್ತಿದೆ. ನಟಿ ರಾಗಿಣಿ ದ್ವಿವೇದಿ ಎರಡನೇ ಆರೋಪಿಯಾಗಿದ್ದು, ಅಪರಾಧ ಒಳಸಂಚು ಅಡಿ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆ 21, 21ಸಿ, 27ಎ, 27ಬಿ, 29ಐಪಿಸಿ, 120ಬಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಅವರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗುವುದು ಎಂದು ಗೃಹಸಚಿವರ ಹೇಳಿಕೆಗೆ ನಮ್ಮ ಕಾರ್ಯಕರ್ತರು, ಪ್ರಜ್ಞಾವಂತ ನಾಗರಿಕರು ಸ್ವಾಗತಿಸಿದ್ದಾರೆ. ಎಷ್ಟೇ ಪ್ರಭಾವಿ ವ್ಯಕ್ತಿಯಾದರೂ ಈ ನೆಲದ ಕಾನೂನನ್ನು ಮುರಿದರೆ ಕ್ಷಮಿಸಲು ಸಾಧ್ಯವೇ ಇಲ್ಲ.
2/2
— Nalinkumar Kateel (@nalinkateel) September 5, 2020
ಒಟ್ಟು 12 ಜನ ಆರೋಪಿಗಳನ್ನಾಗಿ ಹೆಸರಿಸಲಾಗಿದ್ದು, ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶಿವಪ್ರಕಾಶ್ ಎ1, ರಾಗಿಣಿ ದ್ವಿವೇದಿ ಎ2, ವೀರೇನ್ ಖನ್ನಾ ಎ3, ಪ್ರಶಾಂತ್ ರಂಕಾ ಎ4, ವೈಭವ್ ಜೈನ್ ಎ5, ಆದಿತ್ಯ ಆಳ್ವಾ ಎ6, ಲೂಮ್ ಪೆಪ್ಪರ್ ಎ7, ಪ್ರಶಾತ್ ರಿಜು ಎ8, ಅಶ್ವಿನ್ ಎ9, ಅಭಿ ಸ್ವಾಮಿ ಎ10, ರಾಹುಲ್ ಎ11, ವಿನಯ್ ಎ12 ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.