ಮಡಿಕೇರಿ: ಇದೇ ಅಕ್ಟೋಬರ್ 17 ರಂದು ಕನ್ನಡನಾಡಿನ ಜೀವ ನದಿ ತಲಕಾವೇರಿಯಲ್ಲಿ ತೀರ್ಥೋದ್ಭವ ಜರುಗಲಿದೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಕಾವೇರಿ ತೀರ್ಥೋದ್ಭವದ ವೇಳೆಯಲ್ಲಿ ಭಕ್ತರಿಗೆ ನಿರ್ಬಂಧ ಮಾಡಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕೆ ಜಾಯ್ ತಿಳಿಸಿದ್ದಾರೆ.
Advertisement
ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ತೀರ್ಥೋದ್ಭವ ಜನದಟ್ಟಣೆ ಆಗದಂತೆ ಸಾಂಪ್ರದಾಯಿಕ ವಿಧಿ-ವಿಧಾನಗಳಿಗೆ ಧಕ್ಕೆಯಾಗದಂತೆ ಪೂಜಾ ವಿಧಿ-ವಿಧಾನಗಳು ನಡೆಯಲಿದೆ. ಅಷ್ಟೇ ಅಲ್ಲದೇ ಈ ಬಾರಿ ತೀರ್ಥೋದ್ಭವದಲ್ಲಿ ಸ್ವಯಂಸೇವಕರು ಹಾಗೂ ಅರ್ಚಕಗಳಿಗೂ ಆರ್ಟಿಪಿಸಿಆರ್ ಕೊರೊನಾ ಟೆಸ್ಟ್ ಕಡ್ಡಾಯ. ಕೊವೀಡ್ ಪರೀಕ್ಷಾ ತಪಾಸಣೆಗೆ ಒಳಗಾಗಿ ನೆಗೆಟಿವ್ ವರದಿ ಬರುವವರಿಗೆ ಕಾರ್ಯಕ್ರಮಕ್ಕೆ ಭಾಗವಹಿಸಲು ಪೊಲೀಸ್ ಇಲಾಖೆ ಪಾಸ್ ನೀಡಲಿದೆ.
Advertisement
Advertisement
ಅಷ್ಟೇ ಅಲ್ಲದೇ ಈ ಬಾರಿ ಅಕ್ಟೋಬರ್ 17 ಮತ್ತು 26 ದಸರಾ ಇರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗುವುದು. ಪ್ರವಾಸಿಗರು ಸ್ಥಳೀಯರು ಸಹಕಾರಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
Advertisement