ಹಾಸನ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ 45 ವರ್ಷದ ರೈತ ಚಂದ್ರೇಗೌಡ ಮೃತ ದುರ್ದೈವಿ. ತಮ್ಮ ಹೊಲದಲ್ಲಿ ಬೆಳೆಯಲಾಗಿದ್ದ ಶುಂಠಿ ಬೆಳೆಗೆ ಕೀಟನಾಶಕ ಸಿಂಪಡಣೆ ಮಾಡಲು ಹೋಗಿದ್ದಾಗ, ಹೊಲದಲ್ಲಿ ತುಂಡಾಗಿ ಬಿದ್ದಿದ್ದ ತಂತಿಯನ್ನು ತುಳಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Advertisement
Advertisement
ಮೃತ ವ್ಯಕ್ತಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ. ಮನೆಯ ಆಧಾರ ಸ್ತಂಭವಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡು ಕುಟುಂಬದವರು ಕಂಗಾಲಾಗಿದ್ದಾರೆ. ಸ್ಥಳಕ್ಕೆ ಬೇಲೂರು ಪಿಎಸ್ಐ ಅಜೇಯ ಕುಮಾರ್, ಸಹಾಯಕ ಎಂಜಿನಿಯರ್ ಗಳಾದ ಕುಮಾರ್ ಹಾಗೂ ಸಂದೀಪ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.