ಹೈದರಾಬಾದ್: ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆ ಇಂದಿನಿಂದ ಮೇ 1ರವರೆಗೂ ತೆಲಂಗಾಣ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿದೆ.
ತೆಲಂಗಾಣ ಸರ್ಕಾರದ ಆದೇಶದಂತೆ ರಾತ್ರಿ 9 ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ಕೊರೊನಾ ವೈರಸ್ ನಿಯಂತ್ರಿಸಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.
Advertisement
Advertisement
ಈ ಹಿಂದೆ ತೆಲಂಗಾಣ ಹೈಕೋರ್ಟ್ ಕೂಡ ಕೋವಿಡ್-19 ಸೋಂಕನ್ನು ತಡೆಗಟ್ಟಲು ರಾತ್ರಿ ಹಾಗೂ ವಾರಾಂತ್ಯದಲ್ಲಿ ನೈಟ್ ಕರ್ಫ್ಯೂ ವಿಧಿಸುವಂತೆ ಸರ್ಕಾರಕ್ಕೆ ತಿಳಿಸಿತ್ತು. ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.