ಬೆಂಗಳೂರು: ಕೇಂದ್ರದ ಮಾಜಿ ಸಚಿವ ದಿ.ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮತ್ತು ಮಗಳು ಜೆಡಿಎಸ್ಗೆ ಬಂದರೆ ಸ್ವಾಗತ. ಪಕ್ಷದಲ್ಲಿ ಅವರಿಗೆ ಉತ್ತಮ ಗೌರವ ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
Advertisement
ಜೆಡಿಎಸ್ ಸ್ಟ್ರಾಂಗ್ ಎಂದು ದಿ.ಅನಂತ್ ಕುಮಾರ್ ಅವರ ಪುತ್ರಿ ವಿಜೇತ ಅನಂತ್ ಕುಮಾರ್ ಟ್ವೀಟ್ ಮಾಡಿದ ಬೆನ್ನಲ್ಲೇ ಈ ಕುರಿತು ಪ್ರತಿಕ್ರಿಯಿಸಿದ್ದು, ಅನಂತ್ ಕುಮಾರ್ ಪತ್ನಿ ಮತ್ತು ಮಕ್ಕಳು ಜೆಡಿಎಸ್ಗೆ ಬಂದರೆ ಸಂತೋಷದಿಂದ ಸ್ವಾಗತ ಮಾಡುತ್ತೇವೆ. ನಮ್ಮ ಪಕ್ಷದಲ್ಲಿ ಉತ್ತಮ ಗೌರವವನ್ನು ಕೊಡುತ್ತೇವೆ. ಬಿಜೆಪಿಯವರು ಗೌರವ ಕೊಟ್ಟಿಲ್ಲ. ಅವರು ನಮ್ಮ ಪಕ್ಷಕ್ಕೆ ಬಂದರೆ ಸಂತೋಷದಿಂದ ಸ್ವಾಗತ ಮಾಡುತ್ತೇವೆ ಎಂದರು. ಇದನ್ನೂ ಓದಿ: ಜೆಡಿಎಸ್ ಸ್ಟ್ರಾಂಗ್ ಎಂದ ಅನಂತ್ ಕುಮಾರ್ ಪುತ್ರಿ, ತೆನೆ ಹೊರುತ್ತಾರಾ?
Advertisement
Why Karnataka politics is really interesting?
JDS is still a very strong political force
— Vijeta AnanthKumar (@vijeta_at) July 29, 2021
Advertisement
ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಅನೇಕ ಬದಲಾವಣೆ ಆಗುತ್ತದೆ. ಎಲ್ಲವನ್ನೂ ಕಾದು ನೋಡಿ, ಅನಂತ್ ಕುಮಾರ್ ಅವರ ಮಗಳು ಟ್ವೀಟ್ ಮೂಲಕ ನಮ್ಮ ಪಕ್ಷದ ಬಗ್ಗೆ ಮಾತನಾಡಿರುವುದು ಕಾರ್ಯಕರ್ತರಲ್ಲಿ ಉತ್ಸಾಹ ಮೂಡುವಂತೆ ಮಾಡಿದೆ. ಜೆಡಿಎಸ್ ಪಕ್ಷ ಇನ್ನೂ ಪ್ರಬಲವಾಗಿದೆ ಎನ್ನುವ ಅವರ ಅಭಿಪ್ರಾಯಕ್ಕೆ ಲಕ್ಷಾಂತರ ಕಾರ್ಯಕರ್ತರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
Advertisement
ರಾಜ್ಯದ ಪ್ರಮುಖ ನಾಯಕರಾಗಿದ್ದ ಅನಂತ್ ಕುಮಾರ್ ಅವರ ಪುತ್ರಿ ನನ್ನ ಸಹೋದರಿ ಸಮಾನರು. ಅವರು ಜೆಡಿಎಸ್ ಪಕ್ಷದ ಬಗ್ಗೆ ಅವರ ಅಭಿಪ್ರಾಯ ತಿಳಿಸಿದ್ದಕ್ಕೆ ಧನ್ಯವಾದಗಳು. ಅವರ ಅಭಿಪ್ರಾಯ ನಮ್ಮ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿದೆ. ಅವರ ತಾಯಿ ಬರುವುದಾದರೆ ಪಕ್ಷಕ್ಕೆ ಸಂತೋಷದಿಂದ ಆಹ್ವಾನ ಮಾಡುತ್ತೇನೆ. ಬಿಜೆಪಿಯಲ್ಲಿ ಅವರನ್ನು ಗುರುತಿಸಿಲ್ಲ, ನಮ್ಮ ಪಕ್ಷಕ್ಕೆ ಬರುವುದಾದರೆ ಅತ್ಯಂತ ಸಂತೋಷದಿಂದ ಸ್ವಾಗತಿಸುತ್ತೇನೆ. ಮುಂದಿನ ರಾಜಕಾರಣದಲ್ಲಿ ಅನೇಕ ರೀತಿಯ ಬದಲಾವಣೆಗಳು ಆಗಲಿದೆ. ಅಲ್ಲಿಯವರೆಗೂ ನಾವು ತಾಳ್ಮೆಯಿಂದ ಕಾಯಬೇಕು ಎಂದು ಹೇಳಿದ್ದಾರೆ.